ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ.ವಿದ್ಯಾಶಂಕರ್ ನೇಮಕ
ಮೈಸೂರು

ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ.ವಿದ್ಯಾಶಂಕರ್ ನೇಮಕ

May 29, 2019

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ. ಎಸ್.ವಿದ್ಯಾಶಂಕರ್ ಅವರನ್ನು ನೇಮಕ ಗೊಳಿಸಿ ರಾಜ್ಯಪಾಲ ವಿ.ಆರ್.ವಾಲಾ ಮಂಗಳ ವಾರ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅವರ ಅಧಿಕಾರಾವಧಿ ಮಾ.11ಕ್ಕೆ ಮುಕ್ತಾಯ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಕುಲಪತಿ ಆಯ್ಕೆಗೆ ಜಾನಪದ ವಿವಿ ಕುಲಪತಿ ಪ್ರೊ.ಡಿ.ಬಿ.ನಾಯಕ್, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಹಾಗೂ ನ್ಯಾಕ್ ನಿರ್ದೇಶಕ ಡಾ.ಎಸ್.ಸಿ.ಶರ್ಮಾ ಒಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಮುಕ್ತ ವಿವಿ ಶೈಕ್ಷಣಿಕ ಡೀನ್ ಪ್ರೊ.ಜಗದೀಶ್, ಬೆಂಗಳೂರು ವಿವಿ ಪ್ರಾಣಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಂ.ರಾಮಚಂದ್ರ, ಮೈಸೂರು ವಿವಿ ಅಪ್ಲೈಡ್ ಬಾಟನಿ ವಿಭಾಗದ ಪ್ರಾಧ್ಯಾಪಕ ಪೆÇ್ರ. ರವಿಶಂಕರ್ ರೈ ಹಾಗೂ ಬೆಂಗಳೂರು ತಾಂತ್ರಿಕ ಸಂಸ್ಥೆ (ಬಿಐಟಿ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪೆÇ್ರ. ವಿದ್ಯಾಶಂಕರ್ ಅವರ ಹೆಸರುಗಳನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಸಮಿತಿ ಮುಕ್ತ ವಿವಿ ನಿಯಮದಂತೆ ಕುಲಪತಿ ಹುದ್ದೆಗೆ ಮೂವರು ವ್ಯಕ್ತಿಗಳಿಗಿಂತ ಕಡಿಮೆ ಇಲ್ಲದಂತೆ ಹೆಸರು ಶಿಫಾರಸ್ಸು ಮಾಡಬೇಕಾಗಿದ್ದು, ಅದರಂತೆ ನಾಲ್ವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿತ್ತು. ಶಿಫಾರಸ್ಸು ಗೊಂಡವರ ಪೈಕಿ ಬೆಂಗಳೂರು ತಾಂತ್ರಿಕ ಸಂಸ್ಥೆ (ಬಿಐಟಿ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪೆÇ್ರ. ವಿದ್ಯಾಶಂಕರ್ ಹೆಸರನ್ನು ಅಂತಿಮಗೊಳಿಸಿ, ರಾಜ್ಯಪಾಲ ವಿ.ಆರ್.ವಾಲಾ ಆದೇಶಿಸಿದ್ದಾರೆ. ಈ ಬಗ್ಗೆ ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯೆ ನೀಡಿದ ನೂತನ ಕುಲಪತಿ ಡಾ.ಎಸ್.ವಿದ್ಯಾಶಂಕರ್, ರಾಜ್ಯ ಸರ್ಕಾರ ಮುಕ್ತ ವಿವಿ ಕುಲಪತಿಯನ್ನಾಗಿ ಆಯ್ಕೆ ಮಾಡಿ ರುವುದು ಸಂತಸ ತಂದಿದ್ದು, ಮೇ.30 ರಂದು ಅಧಿಕಾರ ಸ್ವೀಕಾರ ಮಾಡುತ್ತೇನೆ ಎಂದು ತಿಳಿಸಿದರು.

Translate »