ಇಂದಿನಿಂದ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ
ಕೊಡಗು

ಇಂದಿನಿಂದ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ

November 9, 2018

ಮಡಿಕೇರಿ: ಟಿಪ್ಪು ಜಯಂತಿ (ಶನಿವಾರ) ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ನವೆಂಬರ್ 9 ರ ಸಂಜೆ 6 ಗಂಟೆಯಿಂದ ನವೆಂಬರ್ 11 ಬೆಳಿಗ್ಗೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹಪ್ರವೇಶ ಮುಂತಾದ ಸಮಾರಂಭಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ, ಸಮಾರಂಭ ಮತ್ತು ಮೆರ ವಣಿಗೆಯನ್ನು ನಡೆಸಬಾರದು. ಎಲ್ಲಾ ಸಾರ್ವಜನಿಕ/ರಾಜ ಕೀಯ ಬಹಿರಂಗ ಸಭೆ-ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತಾ-ರೋಕಾ ಹಾಗೂ ಮುತ್ತಿಗೆ ಮುಂತಾದವು ಗಳನ್ನು ಸಂಪೂರ್ಣ ನಿಷೇಧಿüಸಿದೆ. ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನವೆಂಬರ್ 10 ರಂದು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಸಂತೆ-ಜಾತ್ರೆಗೆ ನಿರ್ಬಂಧವಿದೆ. ನಿಷೇದಿsತ ಅವಧಿಯಲ್ಲಿ 5 ಜನರಿಗಿಂತ ಮೇಲ್ಪಟ್ಟು ಗುಂಪು ಸೇರಬಾರದು. ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್/ ಎ.ಟಿ.ಎಂ. ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ.

ಮದ್ಯ ಮಾರಾಟ ನಿಷೇಧ: ಕೊಡಗು ಜಿಲ್ಲೆಯಾದ್ಯಂತ ಅಬಕಾರಿ ಕಾಯ್ದೆ 1965ರ ಕಲಂ 21 ರಡಿ ನವೆಂಬರ್ 8ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 11ರ ಬೆಳಿಗ್ಗೆ 8 ಗಂಟೆಯ ವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಕ್ಲಬ್, ಹೋಟೆಲ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

Translate »