ಇಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಮೈಸೂರು

ಇಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

July 1, 2018

ಮೈಸೂರು: ಮೈಸೂರು ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಜು.1ರಂದು 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಸಮಯ ದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರೀಕ್ಷೆಯು ಸುಗಮವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇ ಶ್ವರರಾವ್ ಆದೇಶ ಹೊರಡಿಸಿದ್ದಾರೆ.

ಕಲಂ 144ರ ಅನ್ವಯ ಹೊರಡಿಸಿದ ಈ ಆದೇಶದನ್ವಯ ಜು.1ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ 12 ಕೇಂದ್ರಗಳ ಪ್ರದೇಶಗಳಲ್ಲಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸಂಚ ರಿಸಬಾರದು ಮತ್ತು ಯಾರೂ ಆಕ್ಷೇ ಪಾರ್ಹ ವಸ್ತುಗಳನ್ನು ಒಯ್ಯ ಬಾರದೆಂದು ಹಾಗೂ ಪರೀಕ್ಷಾ ಕೇಂದ್ರದ ಬಳಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Translate »