ಮೈಸೂರು, ಸೆ.26(ಎಸ್‍ಪಿಎನ್)- `ಮಹಿಷ ದಸರಾ’ ಆಚರಣೆಗೆ ಮೈಸೂ ರಿನ ಸಂಘ-ಸಂಸ್ಥೆಗಳು, ಸಾರ್ವ ಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ವ್ಯಾಪ್ತಿ ಹಾಗೂ ಟೌನ್ ಹಾಲ್ ಮುಂಭಾಗದ 500 ಮೀಟರ್ ಸುತ್ತಲೂ ನಾಳೆ (ಸೆ.27)ಬೆಳಿಗ್ಗೆ 6ರಿಂದ ರಾತ್ರಿ 12ರವ ರೆಗೆ ಯಾವುದೇ ಸಭೆ-ಸಮಾರಂಭ, ಮೆರವಣಿಗೆ ನಡೆಸದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆದೇಶಿಸಿದ್ದಾರೆ. ಯಾವುದೇ ಸಂW Àಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ, ಸಭೆ-ಸಮಾ ರಂಭ, ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಕಾನೂನು ಕ್ರಮಕೈಗೊಳ್ಳ ಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.