ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ?

ಅಜ್ಜಂಪುರ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸೊಲ್ಲಾಪುರದಲ್ಲಿ ನಡೆದ ಶ್ರೀಗುರುಸಿದ್ದರಾಮಯ್ಯ ಶಿವಯೋಗಿ ಗಳ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಣೇಹಳ್ಳಿಯ ಶ್ರೀತರಳಬಾಳು ಶಾಖಾ ಮಠದ ಶ್ರೀ ಡಾ.ಪಂಡಿತಾರಾಧ್ಯ ಶಿವಾ ಚಾರ್ಯ ಸ್ವಾಮೀಜಿಗಳು, ಮದ್ಯಪಾನದಿಂದ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಸೇರಿದಂತೆ ಹಲವು ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡ ಬೇಕು ಎಂದು ತಿಳಿಸಿದರು. ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸ್ವಾಮೀಜಿಗಳ ಅಪೇಕ್ಷೆಯನ್ನು ಪೂರೈಸುತ್ತೇನೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.