ಲೋಕೋಪಯೋಗಿ ಇಲಾಖೆಯಲ್ಲಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ
ಮೈಸೂರು

ಲೋಕೋಪಯೋಗಿ ಇಲಾಖೆಯಲ್ಲಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

July 10, 2019

ಬೆಂಗಳೂರು, ಜು.9-ಸಮ್ಮಿಶ್ರ ಸರ್ಕಾ ರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ. ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್‍ಗಳ ವರ್ಗಾವಣೆ ಆದೇಶಕ್ಕೆ ರೇವಣ್ಣ ಸಹಿ ಹಾಕಿದ್ದಾರೆ.

ಸೋಮವಾರ ಸಚಿವರೆಲ್ಲಾ ರಾಜೀ ನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ ನಡೆಸಿ ದ್ದಾರೆ. ಮೈತ್ರಿ ಉಳಿಸಿಕೊಳ್ಳಲು ಎರಡೂ ಪಕ್ಷದ ಮುಖಂಡರು ಓಡಾಡುತ್ತಿದ್ದರೆ, ರೇವಣ್ಣ ಅವರು ಮಾತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಸರ್ಕಾರ ಪತನ ದಂಚಿಗೆ ತಲುಪಿರುವ ಸಮಯದಲ್ಲಿ ದಿಢೀರ್ ಎಂದು ಅಧಿಕಾರಿಗಳಿಗೆ ಬಡ್ತಿ ನೀಡಿರುವ ಹಿಂದೆ ಸಚಿವರ ಸ್ವಹಿತಾಸಕ್ತಿ ಅಡಗಿದೆ ಎಂಬ ಆರೋಪ ಕೇಳಿ ಬಂದಿದೆ. ಆತುರ ದಲ್ಲಿ ಬಡ್ತಿ ನೀಡುವ ವಿಷಯ ಕುರಿತು ಸಭೆ ನಡೆಸಲು ಅಧಿಕಾರಿಗಳ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿತ್ತು. ವಿಕಾಸಸೌಧದಲ್ಲಿ ನೆಪಮಾತ್ರಕ್ಕೆ ಸಭೆ ನಡೆಸಿದ ಅಧಿಕಾರಿಗಳು ರಹಸ್ಯ ಸ್ಥಳಕ್ಕೆ ತೆರಳಿ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಸಚಿವರಾಗುತ್ತಿದ್ದಂತೆ ಹಲವು ವಿಭಾ ಗೀಯ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಿ ಸಿಕೊಂಡು ಟೀಕೆಗೆ ಗುರಿಯಾಗಿದ್ದರು.

Translate »