ರಾಜ್ಯದಲ್ಲಿ ಎಲ್ಲಾ ಕ್ಷೇತ್ರದಲ್ಲೂ ವಿದೇಶಿ ಕಂಪನಿಗಳ ನೇರ ಹೂಡಿಕೆಗೆ ಉತ್ತೇಜನ
ಮೈಸೂರು

ರಾಜ್ಯದಲ್ಲಿ ಎಲ್ಲಾ ಕ್ಷೇತ್ರದಲ್ಲೂ ವಿದೇಶಿ ಕಂಪನಿಗಳ ನೇರ ಹೂಡಿಕೆಗೆ ಉತ್ತೇಜನ

August 27, 2020

ಬೆಂಗಳೂರು, ಆ.26(ಕೆಎಂಶಿ)- ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶ ದಿಂದ ಎಲ್ಲಾ ಕ್ಷೇತ್ರ ಗಳಲ್ಲಿ ವಿದೇಶಿ ಕಂಪನಿ ಗಳ ನೇರ ಹೂಡಿಕೆ ಯನ್ನು ರಾಜ್ಯ ಸರ್ಕಾರ ಉತ್ತೇಜಿಸು ತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿ ಯನ್ ಚೇಂಬರ್ಸ್ ಆಫ್ ಕಾಮರ್ಸ್ ಬುಧವಾರ ಆಯೋಜಿಸಿದ್ದ ಇಂಡೋ -ಜಪಾನಿಸ್ ಬಿಸಿನೆಸ್ ಫೋರಂನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸು ವುದಾಗಿ ಭರವಸೆ ನೀಡಿದರು. ಅಲ್ಲದೆ, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳೇನುಎಂಬುದನ್ನು ಜಪಾನಿ ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟರು. “ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ, ಜಪಾನ್‍ಗೆ ಸಂಬಂಧಿಸಿದಂತೆ, ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್ ಕೈಗಾರಿಕಾ ಟೌನ್‍ಶಿಪ್ ಸ್ಥಾಪಿಸಲಾಗಿದೆ. ಇದಲ್ಲದೇ ಜಪಾನಿ ಕಂಪನಿಗಳ ಸಹಯೋಗದೊಂದಿಗೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸ ಲಾಗಿದೆ. ಜಪಾನಿ ಕೈಗಾರಿಕಾ ಟೌನ್‍ಶಿಪ್‍ಗೆ 519.55 ಎಕರೆ ಭೂಮಿ ಮೀಸಲಿಡಲಾಗಿದ್ದು, ರಸ್ತೆ, ವಿದ್ಯುತ್ ಮತ್ತು ನೀರು ಸರಬರಾಜಿನಂತಹ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಟೌನ್‍ಶಿಪ್‍ನಲ್ಲಿ ಹೆವಿ ಎಂಜಿನಿಯರಿಂಗ್, ಯಂತ್ರೋಪಕರಣ, ಆಟೋಮೋಟಿವ್ ಮತ್ತು ಏರೋಸ್ಪೇಸ್ ಘಟಕಗಳಿಗೆ ಆದ್ಯತೆ ನೀಡಲಾಗಿದೆ” ಎಂದು ಹೇಳಿದರು.

ಐಟಿ /ಐಟಿಇಎಸ್, ಯಂತ್ರೋಪಕರಣಗಳು, ವಾಹನಗಳು, ಏರೋಸ್ಪೇಸ್ ಸೇರಿದಂತೆ ರಾಜ್ಯದಲ್ಲಿ ಲಭ್ಯವಿರುವ ಪ್ರಾಥಮಿಕ ಮತ್ತು ತೃತೀಯ ವಲಯದ ಉದ್ದಿಮೆ ಅವಕಾಶಗಳ ಬಗ್ಗೆ ವಿವರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, “ದೇಶದ ಹೂಡಿಕೆದಾರರು ಕರ್ನಾಟಕಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರೆ, ಇತ್ತೀಚೆಗೆ ವಿದೇಶಿ ಉದ್ಯಮಿಗಳೂ ರಾಜ್ಯದ ಬಗ್ಗೆ ಒಲವು ತೋರಿಸುತ್ತಿದ್ದಾರೆ. 2020ರ ಮಾರ್ಚ್‍ಗೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ವಿದೇಶಿ ನೇರ ಹೂಡಿಕೆಯಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ” ಎಂದರು.

“ಹೆಚ್ಚಿನ ಸಂಖ್ಯೆಯ ಸ್ಟಾರ್ಟ್ ಅಪ್‍ಗಳಿಗೆ ರಾಜ್ಯ ನೆಲೆಯಾಗಿದ್ದು, ಉದಯೋನ್ಮುಖ ಉದ್ಯಮಿಗಳಿಗೆ ಪೂರಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿರುವ ಕರ್ನಾಟಕ, ಉದ್ಯಮ ಸ್ನೇಹಿ ಆಡಳಿತದ ಜತೆಗೆ ಕೈಗಾರಿಕೆಗಳಿಗೆ ಪೂರಕವಾದ ನೀತಿ ರೂಪಿಸುವ ಮೂಲಕ ಉತ್ತಮ ವ್ಯವಸ್ಥೆ ನಿರ್ಮಿಸಿದೆ” ಎಂದರು.

Translate »