ಸಂಪೂರ್ಣ ಸಾಲ ಮನ್ನಾಕ್ಕಾಗಿ ರೈತರಿಂದ ವಿವಿಧೆಡೆ ಪ್ರತಿಭಟನೆ
ಮಂಡ್ಯ

ಸಂಪೂರ್ಣ ಸಾಲ ಮನ್ನಾಕ್ಕಾಗಿ ರೈತರಿಂದ ವಿವಿಧೆಡೆ ಪ್ರತಿಭಟನೆ

July 10, 2018

ಮಂಡ್ಯ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಜಿಲ್ಲೆಯ ಹಲವೆಡೆ ಸೋಮವಾರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.

ಮಂಡ್ಯ, ಪಾಂಡವಪುರ, ಕೆ.ಆರ್.ಪೇಟೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಡ್ಯ: ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಮಾ ವೇಶಗೊಂಡ ಪ್ರತಿಭಟನಾಕಾರರು, ಧರಣಿ ನಡೆಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡದಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಚುನಾವಣೆ ಪೂರ್ವದಲ್ಲಿ ರೈತರ ಹಾಗೂ ಸ್ತ್ರೀಶಕ್ತಿ ಸಂಘ ಗಳ ಸಂಪೂರ್ಣ ಸಾಲಮನ್ನಾ ಮಾಡುತ್ತೇನೆ. ಗ್ರಾಮೀಣ ಪ್ರದೇಶದ ಹಲವಾರು ಸಮಸ್ಯೆ ಗಳನ್ನು ಬಗೆಹರಿಸುತ್ತೇನೆ ಎಂದು ಪ್ರಣಾಳಿಕೆ ಯಲ್ಲಿ ತಿಳಿಸಿದ್ದರು. ಆದರೆ ಈಗ ಅದನ್ನು ಈಡೇರಿ ಸುವಲ್ಲಿ ವಿಫಲರಾಗಿದ್ದಾರೆ. ಆದ್ದ ರಿಂದ ಕೂಡಲೇ ಪ್ರಸ್ತುತ ನಡೆಯುತ್ತಿರುವ ಅಧಿ ವೇಶನದಲ್ಲಿಯೇ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು, ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡಬೇಕು, ಕಾವೇರಿ ಮತ್ತು ಮಹದಾಯಿ ನದಿ ವಿವಾದ ಬಗೆಹರಿಸಬೇಕು, ಮೈಶುಗರ್, ಪಿಎಸ್‍ಎಸ್‍ಕೆ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ ಮಾಡಬೇಕು, ಕೃಷಿ ಹಾಗೂ ಕೃಷಿಯೇತರ ಮತ್ತು ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲವನ್ನು ಯಾವುದೇ ಕಾಲ ಮಿತಿ ಮತ್ತು ಷರತ್ತುಗಳಿಲ್ಲದೆ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಈ ಪ್ರತಿ ಭಟನೆಗೆ ಸ್ತ್ರೀ ಶಕ್ತಿ ಸಂಘ ಮತ್ತು ಕರವೇ ಕಾರ್ಯಕರ್ತರು ಬೆಂಬಲ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೊಮ್ಮೇಗೌಡ, ನಾಗಣ್ಣ, ಶಿವಳ್ಳಿ ಚಂದ್ರು, ಲಿಂಗೇಗೌಡ, ನವೀನ್ ಕುಮಾರ್, ಜಯರಾಮ, ಹರೀಶ್, ಲತಾ ಶಂಕರ್, ನಂಜಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಕೆ.ಆರ್.ಪೇಟೆ: ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇವಲ ಸುಸ್ತಿದಾರರ ಬೆಳೆ ಸಾಲ ಮನ್ನಾ ಮಾಡಿರುವುದು ರೈತ ವಿರೋಧಿ ನೀತಿಯಾಗಿದೆ ಎಂದು ಆರೋಪಿಸಿ ತಾಲೂಕು ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿ ಭಟನಾಕಾರರು, ರಾಜ್ಯ ಸರ್ಕಾರದ ಸಾಲಮನ್ನಾ ನಡೆ ವಿರೋಧಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಶಂಕರ್, ಕಾರ್ಯದರ್ಶಿ ನಾರಾಯಣ ಸ್ವಾಮಿ, ಮುಖಂಡರಾದ ಪುಟ್ಟೇಗೌಡ, ರಾಜಣ್ಣ, ಮಹೇಶ್, ಮುದ್ದುಕುಮಾರ್, ರವಿ, ನಾಗರಾಜು, ಕೃಷ್ಣೇಗೌಡ, ತಮ್ಮಯ್ಯ, ಪ್ರಕಾಶ್, ಶಿವಪ್ಪ, ಬಸವರಾಜು, ಜಯರಾಂ, ಚಂದ್ರೇಗೌಡ ಮತ್ತಿತರಿದ್ದರು.

ಮಳವಳ್ಳಿ: ಸಾಲಮನ್ನಾಕ್ಕೆ ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿ ಎದುರು ತಾಲೂಕು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ್ ದಿನೇಶ್‍ಚಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡ ಶ್ರೀನಿವಾಸ್ ಬಸವರಾಜು, ಪುಟ್ಟೇಗೌಡ, ನಂಜೇಗೌಡ, ನಿಂಗೇಗೌಡ, ಜಯರಾಮ್, ಸೇರಿದಂತೆ ಅನೇಕರಿದ್ದರು.

ಪಾಂಡವಪುರ: ವಿವಿಧ ಬೇಡಿಕೆ ಈಡೇರಿ ಕೆಗೆ ಆಗ್ರಹಿಸಿ ತಾಲೂಕು ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮಿನಿವಿಧಾನಸೌಧದ ಎದುರು ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ತಡೆದು ಪ್ರತಿಭಟಿಸಿ, ನಂತರ ಮಿನಿವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿ ಸದೆ ಮಾತಿಗೆ ತಪ್ಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆ ಯೊಳಗೆ ರಾಜ್ಯದ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡು ವುದಾಗಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿ ದ್ದರು. ಆದರೆ ಈಗ ಬಜೆಟ್‍ನಲ್ಲಿ ಕೇವಲ ಸುಸ್ತಿದಾರರ ಸಾಲ ಮಾತ್ರ ಮನ್ನಾ ಮಾಡಿ ರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ 7 ಕೆಜಿ ಅಕ್ಕಿಯಲ್ಲಿ 2 ಕೆಜಿ ಕಡಿಮೆ ಮಾಡುವ ಮೂಲಕ ಕುಮಾರಸ್ವಾಮಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಪೆಟ್ರೊಲ್, ಡೀಸೆಲ್ ಹಾಗೂ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜನರಿಗೆ ಅನ್ಯಾಯ ಮಾಡಿ ದ್ದಾರೆ. ಶಾಲಾ ಮಕ್ಕಳಿಗೆ ಉಚಿತ ಬಸ್‍ಪಾಸ್ ನೀಡಬೇಕು. ಪಿಎಸ್ ಎಸ್‍ಕೆ ಹಾಗೂ ಮಂಡ್ಯದ ಮೈಷುಗರ್ ಕಾರ್ಖಾನೆಗಳ ಪುನಶ್ಚೇತನಕ್ಕೆ ಶೀಘ್ರವೇ ಕ್ರಮ ಕೈಗೊಂಡು ಜಿಲ್ಲೆಯ ರೈತರಿಗೆ ಅನುಕೂಲ ಮಾಡಿ ಕೊಡಬೇಕು. ಜತೆಗೆ ಚುನಾವಣೆಗೂ ಮುನ್ನಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಕೆ.ಟಿ.ಗೋವಿಂದೇ ಗೌಡ, ನಾಗರಾಜು, ತಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ, ಪಿಎಸ್‍ಎಸ್‍ಕೆ ಉಪಾಧ್ಯಕ್ಷ ಪ್ರಕಾಶ್ ಸೇರಿದಂತೆ ಹಲವರಿದ್ದರು.

Translate »