ರೈತರಿಂದ ರಾಷ್ಟ್ರೀಯ ಹೆದ್ದಾರಿ ತಡೆ, ಸಂಚಾರ ಅಸ್ತವ್ಯಸ್ತ
ಹಾಸನ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಯು ರೈತರಿಗೆ ಮರಣಶಾಸನವಾಗಿದ್ದು, ಕೂಡಲೇ ಈ ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿ ನಗರ ದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೂವನಹಳ್ಳಿ ಬೈಪಾಸ್‍ನ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿ ಯಿಂದ ರೈತ ಸಂಘದ ನೂರಾರು ಕಾರ್ಯಕರ್ತರು ಬೂವನಹಳ್ಳಿ ಬೈಪಾಸ್ ವರೆಗೂ ಮೆರವಣಿಗೆಯಲ್ಲಿ ಬಂದು ಕೆಲ ಕಾಲ ಹೆದ್ದಾರಿ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷÀಣೆ ಕೂಗಿದರು.
ಈ ಹಿಂದೆ ಕೇಂದ್ರ ಸರ್ಕಾರ ಇದೇ ರೀತಿ ಭೂ ಸ್ವಾಧೀನ ಕಾಯ್ದೆ ಜಾರಿಗೊಳಿ ಸಲು ಮುಂದಾದಾಗ ಕೆಲ ರಾಜ್ಯಗಳು ವಿರೋಧಿಸಿದ್ದವು. ಹಾಗಾಗಿ, ಈ ವಿಚಾರ ದಲ್ಲಿ ನಿರ್ಣಯ ಕೈಗೊಳ್ಳುವ ಅಧಿಕಾರ ವನ್ನು ಕೇಂದ್ರ ಸರ್ಕಾರದ ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ. ಜೊತೆಗೆ, ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದಕ್ಕೂ ಮೊದಲು ರೈತರ ಒಪ್ಪಿಗೆ ಪಡೆಯಬೇಕು ಹಾಗೂ ಉದ್ದೇಶಿತ ಯೋಜನೆಗೆ ಮಾತ್ರ ಭೂಮಿ ಬಳಕೆ ಮಾಡಿಕೊಳ್ಳಬೇಕು. ಭೂಮಿಯ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚಿನ ಪರಿಹಾರ ನೀಡಬೇಕು ಎಂಬುದು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ತಿಳಿಸಿದೆ ಎಂದರು.
ಸ್ವಾಧೀನಪಡಿಸಿಕೊಂಡ ಜಮೀನು ಐದು ವರ್ಷದಲ್ಲಿ ಉದ್ದೇಶಿತ ಯೋಜ ನೆಗೆ ಬಳಕೆಯಾಗದಿದ್ದರೆ ರೈತರಿಗೆ ಜಮೀನು ಹಿಂದಿರುಗಿಸಬೇಕಿತ್ತು. ಆದರೆ, ರಾಜ್ಯದಲ್ಲಿ ಅಧಿಕಾರ ದುರ್ಬಳಕೆ ಮಾಡಿ ಕೊಂಡಿರುವ ಸಮ್ಮಿಶ್ರ ಸರ್ಕಾರ ಸದನದಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ಭೂ ಸ್ವಾಧೀನ ಮಸೂದೆ ಅಂಗೀಕರಿಸಿದೆ. ಅದರಲ್ಲಿ ರೈತರಿಗೆ ಸಮಸ್ಯೆಯಾಗುವಂತಹ ಸಾಕಷ್ಟು ಅಂಶಗಳಿವೆ. ಇದರಿಂದ ರೈತರು ತಮ್ಮ ಹಕ್ಕು ಕಳೆದುಕೊಳ್ಳವರು. ಹಾಗಾಗಿ ಮಸೂದೆ ಜಾರಿಗೆ ಅವಕಾಶ ನೀಡ ಬಾರದು ಎಂದು ಆಗ್ರಹಿಸಿದರು.
ರೈತರನ್ನು ಒಕ್ಕಲೆಬ್ಬಿಸುವ ಹಾಗೂ ರಿಯಲ್ ಎಸ್ಟೇಟ್ ಕುಳಗಳಿಗೆ ಅನುಕೂಲ ಮಾಡಿಕೊಡಲು ಈ ಮಸೂದೆ ತರ ಲಾಗಿದೆ ಎಂದು ಆರೋಪಿಸಿದರು.
ಹೆದ್ದಾರಿ ಬಂದ್‍ನಿಂದ ಬೆಂಗಳೂರು-ಮಂಗಳೂರು ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರಸ್ತೆಯ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಆನೆಕೆರೆ ರವಿ, ಬಾಬು, ಅಂಗಡಿ ರಾಜಣ್ಣ, ಜಯರಾಮು ಹಾಜರಿದ್ದರು.