ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಆರೋಪಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಇರುವ ಅರಳಿಮರದ ಕೆಳಗಡೆ ಕುಳಿತು ಪ್ರತಿಭಟನೆ ಆರಂಭಿಸಿದ ಪ್ರತಿಭಟನಾಕಾರರು, ಕೇರಳ ಸರ್ಕಾರ ಹಾಗೂ ಅಲ್ಲಿನ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಬರಿಮಲೆ ಕ್ಷೇತ್ರದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಅಯ್ಯಪ್ಪ ಭಕ್ತರನ್ನು ಬಂಧಿಸುವ ಮೂಲಕ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಧÀಕ್ಕೆ ತರಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಪ್ರತಿಭಟನೆಯಲ್ಲಿ ಸಮಿತಿಯ ಕಾರ್ಯಕರ್ತರಾದ ನೂರೊಂದು ಶೆಟ್ಟಿ, ಕೆಲ್ಲಂಬಳ್ಳಿ ಸೋಮನಾಯಕ್, ಕಾಗಲವಾಡಿ ಮರಿಸ್ವಾಮಿ, ಗಣೇಶ್, ಸುಂದರ್‍ರಾಜ್, ನಾಗೇಂದ್ರಸ್ವಾಮಿ, ಶಿವಸ್ವಾಮಿ, ಮಾರ್ಕೆಟ್ ಕುಮಾರ್, ನಾಗೇಶ್ ನಾಯ್ಕ ಸೇರಿದಂತೆ ಇತರರು ಭಾಗವಹಿಸಿದ್ದರು.