ಕೇಂದ್ರ ಸರ್ಕಾರದ ಜನ ವಿರೋಧಿ  ಆರ್ಥಿಕ ನೀತಿ ವಿರುದ್ಧ ಪ್ರತಿಭಟನೆ
ಮೈಸೂರು

ಕೇಂದ್ರ ಸರ್ಕಾರದ ಜನ ವಿರೋಧಿ ಆರ್ಥಿಕ ನೀತಿ ವಿರುದ್ಧ ಪ್ರತಿಭಟನೆ

January 20, 2019

ಮೈಸೂರು: ರೈತ ಕಾರ್ಮಿಕರ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಗಳನ್ನು ವಿರೋಧಿಸಿ, ರೈತ ಕಾರ್ಮಿಕರ ಪರವಾದ ನೀತಿಗಳ ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‍ಎಸ್) ಮತ್ತು ಸೆಂಟರ್ ಫಾರ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಮೈಸೂರು ಜಿಲ್ಲಾ ಸಮಿತಿ ಕಾರ್ಯಕರ್ತರು ಶನಿವಾರ ಮೈಸೂರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಸಾಲ ಬಾಧಿತ ರೈತರ ಸಾಲ ಮನ್ನಾ ಮಾಡಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ರೈತರ ಬೆಳೆಗೆ ವೈಜ್ಞಾನಿಕವಾಗಿ ಲೆಕ್ಕಿಸಲಾದ ಒಟ್ಟು ವೆಚ್ಚಕ್ಕೆ ಶೆ.50 ಲಾಭಾಂಶ ಸೇರಿಸಿ ನಿಗದಿಪಸಲಾಗುವ ಕನಿಷ್ಟ ಬೆಂಬಲ ಬೆಲೆ ಖಾತರಿಯಾಗಿ ದೊರೆಯುವಂತೆ ಕಾಯ್ದೆ ರೂಪಿಸಬೇಕು. 7ನೇ ವೇತನ ಆಯೋಗದ ಶಿಫಾರಸಿನಂತೆ 18,000 ರೂ. ಕನಿಷ್ಟ ಕೂಲಿ ಜಾರಿಗೊಳಿಸಬೇಕು. ಬಗರ್‍ಹುಕುಂ ಸಾಗುವಳಿ ಮಾಡುವ ರೈತರಿಗೆ ಸಾಗುವಳಿ ಪತ್ರ ನೀಡಬೇಕು. ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡ ಬೇಕು. ಅನಿಷ್ಟ ಗುತ್ತಿಗೆ ಪದ್ಧತಿ ರದ್ದು ಮಾಡಿ ಖಾಯಂ ಕೆಲಸ ನೀಡಬೇಕು. ರೈತರು, ಕೂಲಿಕಾರರು, ಕಾರ್ಮಿಕರಿಗೆ ತಲಾ 5000 ರೂ. ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸ ಬೇಕು. ಬಂಡವಾಳಿಗರ ಪರವಾದ ಕಾರ್ಮಿಕರ ಕಾನೂನು ತಿದ್ದುಪಡಿ ವಾಪಸು ಪಡೆಯ ಬೇಕು. ಸಾರ್ವಜನಿಕ ರಂಗದ ಖಾಸಗೀಕರಣ ನಿಲ್ಲಬೇಕು. ಜಿಲ್ಲೆಯಲ್ಲಿ ಕಾರ್ಮಿಕ ಕಾನೂನು ಗಳ ಕಡ್ಡಾಯ ಜಾರಿಯಾಗಬೇಕು ಎಂಬ ಬೇಡಿಕೆಗಳಿರುವ ಮನವಿಪತ್ರವನ್ನು ಡಿಸಿ ಕಚೇರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತಸಂಘದ ಮೈಸೂರು ಜಿಲ್ಲಾಧ್ಯಕ್ಷ ಚಿಕ್ಕಣ್ಣೇಗೌಡ, ಪ್ರಧಾನ ಕಾರ್ಯದರ್ಶಿ ಜಗದೀಶ್ ಸೂರ್ಯ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಎಂ.ಕೆ.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಜಿ.ಜಯರಾಂ ಪಾಲ್ಗೊಂಡಿದ್ದರು.

Translate »