ಬಂಟ್ವಾಳದಲ್ಲಿ ಸಿಪಿಐ ಕಚೇರಿ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಮೈಸೂರು

ಬಂಟ್ವಾಳದಲ್ಲಿ ಸಿಪಿಐ ಕಚೇರಿ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ

January 6, 2019

ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿ, ಧ್ವಂಸ ಗೊಳಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಮೈಸೂರಿನ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಇಂದು ಪ್ರತಿ ಭಟನೆ ನಡೆಸಿದ ಸಿಪಿಐ ಕಾರ್ಯಕರ್ತರು, ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾ ಲಯಕ್ಕೆ ಇಬ್ಬರು ಮಹಿಳೆಯರು ಪ್ರವೇಶಿ ಸಿದ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಉದ್ದೇಶಪೂರ್ವಕ ವಾಗಿ ಈ ದಾಳಿ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸುಪ್ರೀಂಕೋರ್ಟ್ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲಾ ವಯೋ ಮಾನದ ಮಹಿಳೆಯರು ಭೇಟಿ ನೀಡ ಬಹುದು ಎಂದು ತೀರ್ಪು ನೀಡಿದೆ. ಅದ ರಂತೆ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದಾರೆ. ಈ ಕುರಿತು ಪರ-ವಿರೋಧ ವಾಗಿ ಕೇರಳದಲ್ಲಿ ಸೈದ್ಧಾಂತಿಕ ಹೋರಾಟ ಗಳು ನಡೆಯುತ್ತಿವೆ. ಆದರೆ ಬಲಪಂಥೀಯ ಹೋರಾಟಗಾರರು ಮಂಗಳೂರು ಜಿಲ್ಲೆಯ ಬಂಟ್ವಾಳ ತಾಲೂಕಿನ ಸಿಪಿಐ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇವ ರನ್ನು ಕೂಡಲೇ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಹೆಚ್.ಆರ್. ಶೇಷಾದ್ರಿ, ಸಹ ಕಾರ್ಯದರ್ಶಿ ಎಚ್.ಬಿ. ರಾಮಕೃಷ್ಣ, ಖಜಾಂಚಿ ಬಸವರಾಜು, ಕೆ.ಜಿ.ಸೋಮರಾಜೇ ಅರಸ್, ಡಿ.ಜಗ ನ್ನಾಥ್, ಕೆ.ಎಸ್.ರೇವಣ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »