ಪ್ರೊ.ಕೆ.ಎಸ್.ಭಗವಾನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪ್ರೊ.ಕೆ.ಎಸ್.ಭಗವಾನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

January 5, 2019

ಮೈಸೂರು: ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದಿರುವ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ನವಜೀವನ ಸಂಸ್ಥೆ ಕಾರ್ಯಕರ್ತರು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಸಂಸ್ಥೆಯ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪ್ರೊ.ಭಗವಾನ್ ವಿರುದ್ಧ ಘೋಷಣೆ ಕೂಗಿದರು. ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರೊ.ಭಗವಾನ್ ಹಿಂದೂ ಧಾರ್ಮಿಕ ಗ್ರಂಥ ರಾಮಾಯಣದ ರಾಮಚಂದ್ರ ಮತ್ತು ಸೀತೆಯ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ. ಹಿಂದು ಧಾರ್ಮಿಕ ವಿರೋಧಿ ಹೇಳಿಕೆಗಳ ಮೂಲಕ ಅನಗತ್ಯವಾಗಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಇಷ್ಟೆಲ್ಲಾ ವಿರೋಧಗಳಿದ್ದರೂ ಪೊಲೀಸರು ಅವರನ್ನು ಬಂಧಿಸದೇ ಕೇವಲ ಹೇಳಿಕೆ ಪಡೆದು ಕಳುಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪದಾಧಿ ಕಾರಿಗಳಾದ ಸುನೀಲ್‍ಕುಮಾರ್, ನಾಗರಾಜ್, ಅಜಿತ್‍ಕುಮಾರ್, ಮಂಜುಳಾ, ಮುಖೇಶ್ ಕುಮಾರ್, ಮಣಿ, ಸು.ಮುರಳಿ ಇನ್ನಿತರರು ಭಾಗವಹಿಸಿದ್ದರು.

Translate »