ಆಪರೇಷನ್ ಕಮಲ ವಿರುದ್ಧ ಪೊರಕೆ ಪ್ರತಿಭಟನೆ

ಮೈಸೂರು: ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿರುವ ಬಿಜೆಪಿ ವಿರುದ್ಧ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಮಾನಿ ಬಳಗದ ಕಾರ್ಯಕರ್ತರು ಮೈಸೂರಿನ ನ್ಯಾಯಾಲಯದ ಮುಂದಿರುವ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಪೊರಕೆಗಳನ್ನು ಹಿಡಿದ ಪ್ರತಿಭಟನಾಕಾರರು ಆಪÀರೇಷನ್ ಕಮಲವನ್ನು ಆಪರೇಷನ್ ಮುಳ್ಳಿಗೆ ಹೋಲಿಸಿ ಅಣಕು ಪ್ರದರ್ಶನ ನಡೆಸಿದರು. ಆಪರೇಷನ್ ಕಮಲದ ಮೂಲಕ ಬಿಜೆಪಿ ನಾಯಕರು ಸಂವಿಧಾನ ವಿರೋಧಿ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ರೈತರ ಸಾಲಮನ್ನಾ ಇನ್ನಿತರ ಜನಪರ ಕೆಲಸದಲ್ಲಿ ತೊಡಗಿ ರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಚು ನಡೆದಿದೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಯತ್ನಿಸುತ್ತಿದ್ದಾರೆ ಎಂದು ಆರೋ ಪಿಸಿದ ಅವರು, ಕೂಡಲೇ ಇಂತಹ ಆಪರೇಷನ್ ಕಮಲ ನಿಲ್ಲಿಸದಿದ್ದರೆ ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸುವುದಾಗಿ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್ ಎಚ್ಚರಿಸಿದರು.