ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಮೈಸೂರು,ಫೆ.23(ಪಿಎಂ)- ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದ ವತಿ ಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಡಿಸಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಸ್ಕೂಟರ್ ವೊಂದನ್ನು ಮಲಗಿಸಿ ಬಿಳಿ ಬಟ್ಟೆ ಹೊದಿ ಸುವ ಮೂಲಕ ಅಣಕು ಶವ ಪ್ರದರ್ಶಿಸಿ, ಪೆಟ್ರೋಲ್ ದರ ಏರಿಕೆ ವಿರುದ್ಧ ಕಿಡಿಕಾರಿ ದರಲ್ಲದೆ, ಅಡುಗೆ ಅನಿಲದ ಬೆಲೆ ಏರಿಕೆ ಯಿಂದ ಇನ್ನು ಮುಂದೆ ಸೌದೆ ಒಲೆಯಲ್ಲೇ ಅಡುಗೆ ಮಾಡಬೇಕಾಗುತ್ತದೆ ಎಂದು ಸೌದೆ ಒಲೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಮಹಾಮಾರಿಯಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಸಂದರ್ಭ ದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಿಸಿರುವುದು ಜನ ಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲು ಕಿಸಿದಂತಾಗಿದೆ ಎಂದು ಕಿಡಿಕಾರಿದರು.

ದರ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಜನಸಾಮಾನ್ಯರು ಆರ್ಥಿಕ ಸಂಕಷ್ಟದಿಂದ ನರಳುವಂತಾಗಿದೆ. ದಿನನಿತ್ಯ ಅಗತ್ಯ ವಸ್ತು ಗಳ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಆದಾಯ ಕುಂಠಿತವಾಗಿರುವ ಈ ಸಂಕಷ್ಟ ಪರಿಸ್ಥಿತಿಯಲ್ಲಿ ಖರ್ಚು ದುಬಾರಿಯಾಗುತ್ತಿದ್ದು, ಜೀವನ ಸಾಗಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಸರ್ಕಾರದ ನಡೆ ಯನ್ನು ಖಂಡಿಸಿದರು. ಬಳಗದ ಸಂಸ್ಥಾಪಕ ಅಧ್ಯಕ್ಷ ಡಿ.ಪಿ.ಕೆ.ಪರಮೇಶ್, ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ಸತೀಶ್‍ಕುಮಾರ್, ಖಜಾಂಚಿ ಕುಮಾರ್ ಪ್ರತಿಭಟನೆಯಲ್ಲಿದ್ದರು.