ಅರಣ್ಯ ವಿದ್ಯಾಲಯ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಗೋಣಿಕೊಪ್ಪಲು:  ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯವನ್ನು ಖಾಸಗಿ ಕಾಲೇಜು ಮಾಡಲು ಮುಂದಾಗಿರು ವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರಸ್ತುತ ಕಾಲೇಜಿಗೆ ಉತ್ತಮ ಅನುದಾನ ಸೇರಿದಂತೆ ಅಭಿವೃದ್ಧಿಗೆ ಪೂರಕವಾಗಿ ನಡೆಯುತ್ತಿದ್ದು, ಇದನ್ನು ಖಾಸಗಿಗೆ ನೀಡಬಾರದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಕಾಲೇಜು ಎದುರು ಜಮಾಯಿಸಿದ ವಿದ್ಯಾರ್ಥಿಗಳು ಖಾಸಗಿಗೆ ನೀಡಿದರೆ ಉದ್ಯೋಗ ಸಮಸ್ಯೆ ಉಂಟಾಗುತ್ತದೆ. ಅಲ್ಲದೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಹಣದ ಆಮಿಷಕ್ಕೆ ಒಳಗಾಗುವುದರಿಂದ ಪ್ರತಿಭೆಗಳು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಮೀಸಲಾತಿ ಇರುವವರಿಗೆ ಮಾತ್ರ ಉದ್ಯೋಗ ಸಿಗುತ್ತದೆ. ಉದ್ಯೋಗದ ಅವಶ್ಯಕತೆ ಇರುವವರಿಗೆ ಸಿಗುವುದಿಲ್ಲ. ಸರ್ಕಾರಿ ಸೀಟುಗಳು ಹಣಕ್ಕಾಗಿ ಮಾರಾಟವಾಗು ತ್ತದೆ, ಕೃಷಿ ಕಾಲೇಜುಗಳು ನಾಯಿಕೊಡೆಗಳಂತೆ ತಲೆ ಎತ್ತುವುದ ರಿಂದ ಗುಣಮಟ್ಟದ ಶಿಕ್ಷಣ ಇರುವುದಿಲ್ಲ. ಸರ್ಕಾರಿ ಕಾಲೇಜು ಗಳಿಗೆ ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಮಾನ್ಯತೆ ಸಿಗುವುದಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. ವಿಶ್ವೇಶ್ವರಯ್ಯ ವಿಶ್ವ ವಿದ್ಯಾಲಯದ ಕುಲಪತಿ ಅವರಿಗೆ ಕಾಲೇಜು ಡೀನ್ ಡಾ. ಕುಶಾಲಪ್ಪ ಮೂಲಕ ಖಾಸಗಿಗೆ ವಹಿಸುವುದನ್ನು ನಿಲ್ಲಿಸುವಂತೆ ಮನವಿ ಪತ್ರ ಸಲ್ಲಿಸಿದರು.