ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಆರೋಪಿಸಿ ಮಹಿಳಾ ಪಿಎಸ್‍ಐ ವಿರುದ್ಧ ಪ್ರತಿಭಟನೆ
ಮೈಸೂರು

ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಆರೋಪಿಸಿ ಮಹಿಳಾ ಪಿಎಸ್‍ಐ ವಿರುದ್ಧ ಪ್ರತಿಭಟನೆ

March 6, 2020

ಮೈಸೂರು, ಮಾ.5(ಪಿಎಂ)-ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಮಹಿಳಾ ಸಬ್‍ಇನ್ಸ್‍ಪೆಕ್ಟರ್ ಒಬ್ಬರು 2 ಸುಳ್ಳು ಪ್ರಕರಣಗಳನ್ನು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ ಎಂದು ನಗ ರದ ನಿವಾಸಿ ಎಸ್.ರವಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ನನ್ನ ವಿರುದ್ಧ ಎರಡು ಸುಳ್ಳು ಪ್ರಕರಣಗಳನ್ನು ಪಿಎಸ್‍ಐ ಶೋಭಾ (ಪ್ರಸ್ತುತ ಪಿಐ) ದಾಖಲಿಸಿದ್ದರು. ಅಲ್ಲದೆ, ನ್ಯಾಯಾಲಯಕ್ಕೆ ನನ್ನ ವಿರುದ್ಧ ದೋಷಾ ರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣಗಳು ಖುಲಾಸೆಯಾಗಿವೆ. ಜೊತೆಗೆ ಈ ವಿಚಾರವಾಗಿ ಬೆಂಗಳೂರು ಪೊಲೀಸ್ ಆಯುಕ್ತರು ಕೇವಲ ಒಂದು ಅಂಶಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿದ್ದರು. ಉಳಿದ ಎಲ್ಲಾ ಅಂಶಗಳ ಬಗ್ಗೆಯೂ ತನಿಖೆ ನಡೆಸಿ ಸದರಿ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಎಸ್.ರವಿ ಆಗ್ರಹಿಸಿದರು.

Translate »