ತೈಲೋತ್ಪನ್ನ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಕೊಡಗು

ತೈಲೋತ್ಪನ್ನ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

January 8, 2019

ಮಡಿಕೇರಿ: ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡಿ ದ್ದರೂ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡುತ್ತಲೇ ಇದೆ ಎಂದು ಆರೋಪಿಸಿ ಹಾಗೂ ಸಚಿವ ಪುಟ್ಟ ರಂಗಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ವಿಧಾನಸೌಧದಲ್ಲಿ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪುಟ್ಟರಂಗಶೆಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರುಗಳು ಪುಟ್ಟರಂಗಶೆಟ್ಟಿ ಅವರ ಪರ ಹೇಳಿಕೆ ನೀಡುತ್ತಿದ್ದು, ಈ ಕ್ರಮವನ್ನು ಖಂಡಿ ಸುವುದಾಗಿ ತಿಳಿಸಿದರು. ಆರೋಪ ಎದುರಿ ಸುತ್ತಿರುವ ಸಚಿವರು ರಾಜೀನಾಮೆ ನೀಡುವ ವರೆಗೆ ಬಿಜೆಪಿ ಹೋರಾಟ ಮುಂದುವರೆ ಯಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದರು ರಾಜ್ಯ ಸರ್ಕಾರ ಮಾತ್ರ ಬೆಲೆ ಏರಿಕೆಯನ್ನು ನಿಯಂತ್ರಿಸುತ್ತಿಲ್ಲ ಎಂದು ಸುನೀಲ್ ಸುಬ್ರಮಣಿ ದೂರಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ರಾಜ್ಯದಲ್ಲಿ ಅಭದ್ರತೆಯ ಸರ್ಕಾರ ಕಾರ್ಯನಿರ್ವಹಿಸು ತ್ತಿದ್ದು, ಕಳೆದ ಆರು ತಿಂಗಳ ಆಡಳಿತ ಇದನ್ನು ಸಾಬೀತು ಪಡಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಹೊಂದಾಣಿಕೆಯ ಕೊರತೆಯಿಂದಾಗಿ ಸರ್ಕಾರಿ ವ್ಯವಸ್ಥೆ ಹಿಡಿತ ತಪ್ಪುತ್ತಿದ್ದು, ಅಧಿಕಾರಿ ಗಳ ಆಡಳಿತ ನಡೆಯುತ್ತಿದೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಧಿಕಾರ ಸ್ವೀಕರಿಸುವಾಗ ಭ್ರಷ್ಟಾಚಾರ ವನ್ನು ನಿರ್ಮೂಲನೆ ಮಾಡುವ ಭರವಸೆ ನೀಡಿದ್ದರು. ಅಲ್ಲದೆ ವಿಧಾನಸೌಧವನ್ನು ದಲ್ಲಾಳಿ ಮುಕ್ತ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತ ಕಾರ್ಯದರ್ಶಿ ಯ ಬಳಿ 25 ಲಕ್ಷ ರೂ. ನಗದು ದೊರೆತ್ತಿ ದ್ದರೂ ಪ್ರಕರಣವನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋ ಪಿಸಿದ ಅವರು, ನಿಷ್ಪಕ್ಷಪಾತ ತನಿಖೆ ನಡೆಸ ಬೇಕೆಂದು ಒತ್ತಾಯಿಸಿದರು. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ನಿಯಂತ್ರಿಸುತ್ತಿದ್ದರೂ ರಾಜ್ಯ ಸರ್ಕಾರ ವಿನಾಕಾರಣ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದು ಭಾರತೀಶ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ರಾಬಿನ್ ದೇವಯ್ಯ, ರವಿ ಕುಶಾಲಪ್ಪ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ, ನಗರಸಭೆಯ ಬಿಜೆಪಿ ಸದಸ್ಯರು ಗಳಾದ ಪಿ.ಡಿ.ಪೊನ್ನಪ್ಪ, ಉಣ್ಣಿಕೃಷ್ಣನ್, ಅನಿತಾ ಪೂವಯ್ಯ, ಶಿವಕುಮಾರಿ ಗಣಪತಿ, ಪ್ರಮುಖರಾದ ಬೆಪ್ಪುರನ ಮೇದಪ್ಪ ಮತ್ತಿ ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »