ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಮಂಡ್ಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

December 26, 2019

ಕೆ.ಆರ್.ಪೇಟೆ, ಡಿ.25- ಪೌರತ್ವ ತಿದ್ದು ಪಡಿ ಕಾಯ್ದೆಯಿಂದ ದೇಶದ ಮುಸ್ಲಿಂ ಬಾಂಧವರಿಗೆ ತೊಂದರೆಯಾಗಲಿದೆ. ಹಾಗಾಗಿ ಎನ್‍ಆರ್‍ಸಿ ಮತ್ತು ಸಿಎಎ ಕಾಯ್ದೆ ಯನ್ನು ಕೈಬಿಟ್ಟು ಬಹುಜನರ ಭಾವನೆ ಗಳಿಗೆ ಗೌರವ ನೀಡಬೇಕು ಎಂದು ಒತ್ತಾ ಯಿಸಿ ಪಟ್ಟಣದಲ್ಲಿ ಬುಧವಾರ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.

ಪಟ್ಟಣದಲ್ಲಿ 144 ನಿಷೇಧಾಜ್ಞೆಯ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ- 2019 ಮತ್ತು ಎನ್‍ಆರ್‍ಸಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ರೈತ ಸಂಘ, ಬಿಎಸ್‍ಪಿ ಸೇರಿ ದಂತೆ ಮತ್ತಿತರ ಪಕ್ಷಗಳು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತ ನಾಡಿ, ದೇಶದ ಎಲ್ಲಾ ಜನರ ಭಾವನೆಗಳಿಗೆ ಗೌರವ ನೀಡದೆ ಹಾಗೂ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬಿಜೆಪಿ ಸರ್ಕಾರ ಲೋಕಸಭೆ ಹಾಗೂ ರಾಜ್ಯಸಭೆ ಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ-2019 ಅನ್ನು ಮಂಡಿಸಿ, ಒಪ್ಪಿಗೆಯನ್ನು ಪಡೆದುಕೊಂಡು ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಿ ಸಂವಿಧಾನದ ಆಶಯ ಗಳನ್ನು ಬುಡಮೇಲು ಮಾಡಲು ಹೊರಟಿದೆ ಎಂದು ದೂರಿದರು.

ಸಾವಿರಾರು ಮಂದಿ ಭಾಗಿ: ಪ್ರವಾಸಿ ಮಂದಿರ ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೈಸೂರು ಚನ್ನರಾಯಪಟ್ಟಣ ರಸ್ತೆಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸುಮಾರು ಒಂದು ಗಂಟೆ ಕಾಲ ರಸ್ತೆ ತಡೆ ನಡೆಸಿ, ರಸ್ತೆಯಲ್ಲಿಯೇ ಪ್ರತಿ ಭಟನಾ ಸಭೆ ನಡೆಸಿದರು. ತಾಲೂಕು ಸೇರಿ ದಂತೆ ಅಕ್ಕಪಕ್ಕದ ತಾಲೂಕುಗಳಿಂದ ಸಾವಿ ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಮುಸ್ಲಿಂ ಬಾಂಧವರು ಕೈಗೆ ಕಪ್ಪು ಪಟ್ಟಿಯನ್ನು ಕಟ್ಟಿ ಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿ ಗಮನ ಸೆಳೆದರು. ಮುಸ್ಲಿಂ ಯುವಕರು ರಾಷ್ಟ್ರಧ್ವಜ ಹಿಡಿದು ದೇಶದ ಪರವಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆ ಸಿದ್ದು ವಿಶೇಷವಾಗಿತ್ತು.

ಪ್ರತಿಭಟನೆಯ ಕೊನೆಯಲ್ಲಿ ಎಲ್ಲಾ ಪ್ರತಿಭಟನಾಕಾರರು ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡುವ ಮೂಲಕ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು.

ಬಿಗಿ ಬಂದೋಬಸ್ತ್: ಎಸ್‍ಪಿ ಕೆ.ಪರಶು ರಾಮ್, ಎಎಸ್‍ಪಿ ಡಾ.ಶೋಭಾರಾಣಿ, ಡಿವೈಎಸ್‍ಪಿ ವಿಶ್ವನಾಥ್ ಅವರ ನೇತೃತ್ವ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮುಂಜಾಗರೂತಾ ಕ್ರಮವಾಗಿ ಪಟ್ಟಣದಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿತ್ತು.

ಪ್ರತಿಭಟನೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಜೆಡಿಎಸ್ ಮುಖಂಡ ಬಸ್ ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕೆ.ಆರ್.ರವೀಂದ್ರ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ. ಚೇತನ್‍ಕುಮಾರ್, ಕೆಯುಐಡಿಎಫ್‍ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬಸ್ತಿ ರಂಗಪ್ಪ, ಬಿ.ನಾಗೇಂದ್ರಕುಮಾರ್, ಎ.ಎಂ. ಸಂಜೀವಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ರಾಮಕೃಷ್ಣೇಗೌಡ, ಕೆಪಿಸಿಸಿ ಹಿಂದು ಳಿದ ವರ್ಗಗಳ ಉಪಾಧ್ಯಕ್ಷ ಡಾ.ಬಿ.ರಾಜ ಶೇಖರ್, ತಾಲೂಕು ರೈತ ಸಂಘಧ ಅಧ್ಯಕ್ಷ ಮರುವನಹಳ್ಳಿ ಶಂಕರ್, ಮುಖಂಡರಾದ ಫಯಾಜ್, ಕೆ.ಗೌಸ್‍ಖಾನ್, ಕೆ.ಯೂನಸ್ ಖಾನ್, ಉಮ್ಮರ್‍ಬೇಗ್, ಡಿ.ಪ್ರೇಮಕುಮಾರ್, ಕೆ.ಎಸ್.ಸಂತೋಷ್‍ಕುಮಾರ್, ನವೀದ್ ಅಹಮದ್, ಆಯಾಜ್, ನಯಾಜ್, ಸಮೀರ್ ಸೇರಿದಂತೆ ಸಹಸ್ರಾರು ಮಂದಿ ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ನಂತರ ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

Translate »