ಕೇಂದ್ರ ಸರ್ಕಾರದ ಶೇ.10ರಷ್ಟು ಮೀಸಲಾತಿ ಖಂಡಿಸಿ ಪ್ರತಿಭಟನೆ
ಮೈಸೂರು

ಕೇಂದ್ರ ಸರ್ಕಾರದ ಶೇ.10ರಷ್ಟು ಮೀಸಲಾತಿ ಖಂಡಿಸಿ ಪ್ರತಿಭಟನೆ

February 3, 2019

ಮೈಸೂರು: ಆರ್ಥಿಕ ವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಹಾಗೂ ಜಿಲ್ಲಾ ಕಾಯಕ ಸಮಾ ಜದ ಒಕ್ಕೂಟದ ಜಂಟಿ ಆಶ್ರಯದಲ್ಲಿ ಶನಿ ವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧೀ ಪುತ್ಥಳಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಕಾಯ್ದೆಯನ್ನು ಈ ಕೂಡಲೇ ಹಿಂಪಡೆಯ ಬೇಕು ಎಂದು ಆಗ್ರಹಿಸಿದರು.

ಎಸ್‍ಸಿ-ಎಸ್‍ಟಿ ಹಾಗೂ ಹಿಂದುಳಿದ ವರ್ಗದವರಿಗೆ ಈಗಿರುವ ಶೇ.50ರಷ್ಟು ಮೀಸಲಾತಿಯನ್ನು ಶೇ.69ಕ್ಕೆ ಹೆಚ್ಚಳ ಮಾಡ ಬೇಕು. ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಕಲ್ಪಿಸಬೇಕು. ರೈತರನ್ನು ಸಂಕಷ್ಟ ದಿಂದ ಪಾರು ಮಾಡಲು ಕೂಡಲೇ ಸ್ವಾಮಿ ನಾಥನ್ ವರದಿ ಜಾರಿಗೊಳಿಸಬೇಕು. ಭ್ರಷ್ಟಾ ಚಾರ ನಿರ್ಮೂಲನೆಗಾಗಿ ಲೋಕಪಾಲ್ ಮಸೂದೆಗೆ ಅಂಗೀಕಾರ ನೀಡಬೇಕು ಎಂದು ಒತ್ತಾಯಿಸಿದರು.

ನೋಟು ನಿಷೇಧ ಹಾಗೂ ಜಿಎಸ್‍ಟಿ ಯಿಂದ ಸಾಮಾನ್ಯ ಜನರು ಸಮಸ್ಯೆ ಅನು ಭವಿಸುತ್ತಿದ್ದಾರೆ. ಇದೀಗ ಅನಿಲ ಬೆಲೆಯೂ ಗಗನಕ್ಕೆ ಏರುತ್ತಿರುವುದರಿಂದ ಬಡವರು, ಕಾರ್ಮಿಕರು, ರೈತರು ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಕೂಡಲೇ ಇದಕ್ಕೆಲ್ಲಾ ಪರಿಹಾರ ಕಂಡು ಕೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣ ತಂದು ಬಡವರ ಬ್ಯಾಂಕ್ ಖಾತೆಗೆ ತಲಾ 15 ಲಕ್ಷ ರೂ. ಜಮಾ ಮಾಡಬೇಕು. ದಿನಕ್ಕೆ 2 ಲಕ್ಷ ಹುದ್ದೆ ಸೃಷ್ಟಿ ಮಾಡುವ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ವೇದಿಕೆ ಅಧ್ಯಕ್ಷ ಕೆ.ಸಿ.ಪುಟ್ಟಸಿದ್ಧಶೆಟ್ಟಿ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಚೋರ್ನಳ್ಳಿ ಶಿವಣ್ಣ, ಜಿಲ್ಲಾ ಕಾಯಕ ಸಮಾಜದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬೋರಪ್ಪಶೆಟ್ಟಿ ಮತ್ತಿ ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »