ಚಾಮುಂಡಿಬೆಟ್ಟದ ತಾವರೆಕಟ್ಟೆ ಗ್ರಾಮಸ್ಥರ ಪ್ರತಿಭಟನೆ

ಮೈಸೂರು: ಗ್ರಾಮಕ್ಕೆ ಸರಿಯಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ತಾವರೆಕಟ್ಟೆ ಗ್ರಾಮಸ್ಥರು ಶನಿವಾರ ದಿಢೀರ್ ಪ್ರತಿಭ ಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡಿಬೆಟ್ಟದ ಗ್ರಾಮ ಪಂಚಾ ಯತಿ ವ್ಯಾಪ್ತಿಯ ತಮ್ಮ ಸಮರ್ಪಕವಾಗಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿ ಗ್ರಾಮದ ಮಹಿಳೆಯರು ಖಾಲಿ ಕೊಡಗಳನ್ನು ಪ್ರದ ರ್ಶಿಸಿ ಕಿಡಿಕಾರಿದರು.

ಇಂದು ಮಧ್ಯಾಹ್ನ ಗ್ರಾಮದ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಜಮಾಯಿಸಿದ ಗ್ರಾಮ ಸ್ಥರು, ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದರೂ ಸಂಬಂಧಿಸಿದವರು ಮೌನಕ್ಕೆ ಶರಣಾಗಿದ್ದಾರೆ. ಪರಿಣಾಮ ನಮ್ಮ ನೀರಿನ ಬವಣೆ ಹೇಳತೀರದಾಗಿದೆ ಎಂದು ಕಿಡಿಕಾರಿದರು.

ರಸ್ತೆ ತಡೆ, ಬೆಂಕಿ ಹಚ್ಚಿ ಆಕ್ರೋಶ: ಕೆಲಕಾಲ ಚಾಮುಂಡಿ ಬೆಟ್ಟದ ರಸ್ತೆ ತಡೆ ನಡೆಸಿದ ಗ್ರಾಮಸ್ಥರು, ರಸ್ತೆ ಮಧ್ಯೆ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ದರು. ರಸ್ತೆ ತಡೆ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರಕ್ಕೂ ತೊಡಕುಂಟಾಗಿತ್ತು. ಇದ ರಿಂದ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಕಿರಿಕಿರಿ ಅನುಭವಿಸಬೇಕಾಯಿತು.

ಸ್ಥಳಕ್ಕೆ ಆಗಮಿಸಿದ ಚಾಮುಂಡಿಬೆಟ್ಟದ ಗ್ರಾಪಂ ಪಿಡಿಓ ಪೂರ್ಣಿಮ, ಬೋರ್ ವೆಲ್‍ನಲ್ಲಿ ನೀರು ಸಮರ್ಪಕವಾಗಿ ಲಭ್ಯ ವಾಗದ ಕಾರಣ ನೀರು ಪೂರೈಕೆಯಲ್ಲಿ ವ್ಯತ್ಯಾಯವಾಗಿದೆ. ಶೀಘ್ರದಲ್ಲಿ ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಹೊಸ ಬೋರ್‍ವೆಲ್ ನಿರ್ಮಿ ಸಲು ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ಭೂವಿಜ್ಞಾನಿಗಳು ಸ್ಥಳ ಪರಿಶೀಲನೆ ನಡೆಸಲಿ ದ್ದಾರೆ. ಅಲ್ಲಿಯವರೆಗೆ ಪ್ರತಿದಿನ ಐದಾರು ಟ್ಯಾಂಕರ್‍ಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಭರವಸೆ ನೀಡಿದ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.