ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ಮಂಡ್ಯ

ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

June 13, 2018

ಮದ್ದೂರು:  ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಇತರೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಎಚ್.ಕೆ.ವಿ.ನಗರದ 1ನೇ ಕ್ರಾಸ್ ಬಡಾವಣೆಯ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.ಬಡಾವಣೆಯ ಮುಂಭಾಗ ಸಮಾವೇಶ ಗೊಂಡ ನಿವಾಸಿಗಳು ಪುರಸಭೆಯ ವಿರುದ್ಧ ಘೋಷಣೆ ಕೂಗಿದರು.

ಬಡಾವಣೆಯಲ್ಲಿ 10 ವರ್ಷದದಿಂದ ಸಮರ್ಪಕವಾಗಿ ಸ್ವಚ್ಛತೆ ಮಾಡಿಲ್ಲ. ಚರಂಡಿ ಯಲ್ಲಿ ಹೂಳು ತುಂಬಿಕೊಂಡು ಗಬ್ಬು ನಾರು ತ್ತಿದೆ. ಜತೆಗೆ ಬಡಾವಣೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ದೂರಿದರು.

ಅನೈರ್ಮಲ್ಯ ಹೆಚ್ಚಳದಿಂದ ಬಡಾವಣೆ ಯಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತಿದ್ದು, ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ನಿರ್ಮಾಣವಾಗಿದೆ. ಕೂಡಲೇ ಪುರಸಭೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಬಡಾವಣೆ ಯನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು. ಕುಡಿಯುವ ನೀರಿನ ಕಂದಾಯ ವಸೂಲಿ ಮಾಡುವ ಅಧಿಕಾರಿಗಳು ನೀರನ್ನು ಸಮರ್ಪಕವಾಗಿ ಪೂರೈಕೆ ಮಾಡಲು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂಧ ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿ ಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಅಧಿಕಾರಿಗಳು ಬಡಾವಣೆಯ ಸಮಸ್ಯೆ ಪರಿಹರಿಸಬೇಕು. ಜನರ ಸಮಸ್ಯೆ ಗಳಿಗೆ ಸ್ಪಂದಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಬಡಾವಣೆಯ ನಿವಾಸಿ ಗಳಾದ ಆಶಾ, ಸೌಜನ್ಯಾ, ಲತಾ, ಸಂದೀಪ್, ತಾಯಮ್ಮ, ಶಿವಣ್ಣ, ಪೃಥ್ವಿ, ರಾಜು ಇದ್ದರು.

Translate »