ಮೈಸೂರು: ಮಲ್ಪೆ ಬೀಚ್‍ನಿಂದ ನಾಪತ್ತೆಯಾಗಿರುವ ಏಳು ಮೀನುಗಾರರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಗಂಗಾ ಮತಸ್ಥರ ಸಂಘದ ಕಾರ್ಯಕರ್ತರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ನಿಗೂಢ ರೀತಿ ನಾಪತ್ತೆಯಾಗಿದ್ದಾರೆ. ಮೀನುಗಾರರ ಭದ್ರತೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಣ್ಮರೆಯಾಗಿರುವ ಮೀನುಗಾರರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಬೇಕು. 26 ದಿನಗಳಾದರೂ ಮೀನುಗಾರರ ಸುಳಿವು ಪತ್ತೆಯಾಗಿಲ್ಲ. ಇದರಿಂದ ಇತರೆ ಮೀನು ಗಾರರಲ್ಲಿ ಭಯ ಆವರಿಸಿದೆ. ಮೀನುಗಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆ ಯಲ್ಲಿ ಮೀನುಗಾರರನ್ನು ಪತ್ತೆ ಮಾಡಿಕೊಡುವ ಮೂಲಕ ಅವರ ಕುಟುಂಬಕ್ಕೆ ನೆರ ವಾಗಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಪ್ರೊ.ಹೆಚ್.ಎಂ. ವಸಂತಮ್ಮ, ಪ್ರಧಾನ ಕಾರ್ಯದರ್ಶಿ ಚಿಕ್ಕಲಿಂಗಸ್ವಾಮಿ, ಖಜಾಂಚಿ ನಾರಾಯಣ ಲೋಲಪ್ಪ, ಸದಸ್ಯರಾದ ರಾಜು, ಮಹದೇವ ಇನ್ನಿತರರು ಪಾಲ್ಗೊಂಡಿದ್ದರು.