ಡಾ.ಸರೋಜಿನಿ ಮಹಿಷಿ ಪರಿಷ್ಕøತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಡಾ.ಸರೋಜಿನಿ ಮಹಿಷಿ ಪರಿಷ್ಕøತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

January 8, 2020

ಮೈಸೂರು, ಜ.7(ಪಿಎಂ)- ಕರ್ನಾಟಕ ದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಡಾ.ಸರೋಜಿನಿ ಮಹಿಷಿ ಪರಿ ಷ್ಕøತ ವರದಿಯನ್ನು ರಾಜ್ಯ ಸರ್ಕಾರ ಸದನ ದಲ್ಲಿ ಮಂಡಿಸಿ ಕಾಯ್ದೆಯಾಗಿ ಜಾರಿಗೊಳಿ ಸಬೇಕೆಂದು ಆಗ್ರಹಿಸಿ ಕದಂಬ ಸೈನ್ಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಡಿಸಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಕರ್ನಾಟಕ ದಲ್ಲಿ ಉದ್ಯೋಗ ನೀಡುವಾಗ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಫೆ.17ರಂದು ನಡೆಯಲಿರುವ ವಿಧಾನ ಸಭಾ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕøತ ವರದಿ ಮಂಡಿಸಿ ಕಾಯ್ದೆ ಯಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕನ್ನಡ, ಕನ್ನಡಿಗರ ಮೇಲೆ ನಿರಂತರ ವಾಗಿ ನಡೆಯುತ್ತಿರುವ ಅನ್ಯ ಭಾಷಿಕರ ದಾಳಿ ಕನ್ನಡಿಗರ ಉದ್ಯೋಗ ಕಸಿಯು ವಲ್ಲಿಯೂ ಮುಂದುವರೆದಿದೆ. ರಾಜ್ಯ ಸರ್ಕಾರದ ಧೋರಣೆಗಳಿಂದಾಗಿಯೂ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿ ಕರುನಾಡಿ ನಲ್ಲೇ ವಂಚನೆಗೆ ಒಳಗಾಗುತ್ತಿದ್ದಾರೆ. ರಾಜ್ಯ ಸರ್ಕಾರ ನಮ್ಮ ಕನ್ನಡಿಗರ ಧ್ವನಿ ಯಾಗಬೇಕು. ಉದ್ಯೋಗದಲ್ಲಿ ಕನ್ನಡಿಗ ರಿಗೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮತ್ತೊಂದು ಗೋಕಾಕ್ ಮಾದರಿಯ ಚಳವಳಿ ಮಾಡ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಖಾಸಗಿ ಉದ್ಯಮಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿದರೆ, ಕನಿಷ್ಠ ವೇತನ ಸೇರಿದಂತೆ ಕಾರ್ಮಿಕ ಕಾನೂನಿನ ಅನುಸಾರ ಎಲ್ಲಾ ರೀತಿಯ ಸೌಲಭ್ಯ ಗಳನ್ನು ನೀಡಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಹೊರ ರಾಜ್ಯದವರಿಗೆ ಸಿ ಮತ್ತು ಡಿ ದರ್ಜೆಯ ಉದ್ಯೋಗ ನೀಡಿ ಕಡಿಮೆ ಸಂಬಳಕ್ಕೆ ಹೆಚ್ಚು ಕೆಲಸ ಮಾಡಿಸು ತ್ತಿದ್ದಾರೆ. ಹೀಗಾಗಿ ರಾಜ್ಯದ ಔದ್ಯೋಗಿಕ ಕ್ಷೇತ್ರದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಘನ ಘೋರ ಅನ್ಯಾಯ ತಡೆಯಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕದಂಬ ಸೈನ್ಯ ಅಧ್ಯಕ್ಷ ಬೇಕ್ರಿ ರಮೇಶ್, ಮೈಸೂರು ವಿಭಾಗದ ಸಂಚಾಲಕ ಎನ್. ವೆಂಕಟೇಶ್, ಮೈಸೂರು ಜಿಲ್ಲಾಧ್ಯಕ್ಷ ಎ.ನಾಗೇಂದ್ರ, ಕಾರ್ಯಕರ್ತ ಮಹದೇವಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Translate »