ದರೋಡೆ, ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಮೈಸೂರು

ದರೋಡೆ, ಅತ್ಯಾಚಾರ ಖಂಡಿಸಿ ಪ್ರತಿಭಟನೆ

September 2, 2021

ಮೈಸೂರು,ಸೆ.1(ಪಿಎಂ)- ಇತ್ತೀಚೆಗೆ ನಡೆದ ದರೋಡೆ ಪ್ರಕರಣದಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಅಮಾಯಕನ ಕುಟುಂಬಕ್ಕೆ ಮತ್ತು ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಾಮೂಹಿಕ ಅತ್ಯಾಚಾರ ನಡೆಸಿದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ದರು. ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಗೆ ಸೂಕ್ತ ಸರ್ಕಾರಿ ಉದ್ಯೋಗ ನೀಡಬೇಕು. ಜೊತೆಗೆ ದರೋಡೆಕೋರರ ಗುಂಡಿಗೆ ಬಲಿಯಾದ ಅಮಾಯಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ವೇದಿಕೆ ಅಧ್ಯಕ್ಷ ಸೋಮೇಗೌಡ, ಗೌರವಾಧ್ಯಕ್ಷ ಹೊನ್ನೇಗೌಡ, ವೇದಿಕೆ ಮುಖಂಡರಾದ ಬಸವರಾಜಪ್ಪ, ಜೋಸೆಫ್, ಅಂಬಿಕಾ, ಸುಧಾಮಣಿ, ಪಾರ್ವತಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »