ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ (ಎಐಟಿಯುಸಿ ಅಂತರ್ಗತ ಸಂಘಟನೆ) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾ ಕಾರರು, ಕಾರ್ಮಿಕರಿಗೆ ವಿವಿಧ ಸೌಲಭ್ಯ ಗಳನ್ನು ಒದಗಿಸಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಅನ್ಯರೂ ನೋಂದಣಿ ಮಾಡಿಕೊಳ್ಳುವುದನ್ನು ತಡೆಗಟ್ಟಬೇಕು. ಆ ಮೂಲಕ ನೈಜ ಫಲಾನುಭವಿಗಳಿಗೆ ಮಂಡಳಿ ನಿಧಿ ಬಳಕೆಯಾಗಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾ ಯಿಸಿದರು. ಅಂಬೇಡ್ಕರ್ ಕಾರ್ಮಿಕ ಹಸ್ತ ಯೋಜನೆಯಡಿ ಕಾರ್ಮಿಕರಲ್ಲದವರು ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುತ್ತಿರು ವುದು ವ್ಯಾಪಕವಾಗಿದ್ದು, ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಈ ಯೋಜನೆಯಡಿ ಕಾರ್ಮಿಕರು ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿ ಮಾಡಿರು ವಂತೆ ಸೌಲಭ್ಯ ವಿತರಣೆಗೂ ಕಾಲಮಿತಿ ನಿಗದಿ ಮಾಡಬೇಕು. ಅಪಘಾತ ಪರಿಹಾರ ಧನವನ್ನು 10 ಲಕ್ಷ ರೂ.ಗೆ ಹಾಗೂ ಸ್ವಾಭಾ ವಿಕ ಮರಣ ಪರಿಹಾರ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಬೇಕು. ಅಲ್ಲದೆ, ಗಂಭೀರ ಸ್ವರೂಪದ ಕಾಯಿಲೆ ಗಳ ಚಿಕಿತ್ಸಾ ವೆಚ್ಚದ ಸೌಲಭ್ಯವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ದರು. ಮಾಸಿಕ ಪಿಂಚಣಿಗಾಗಿ ಅರ್ಜಿ ಸಲ್ಲಿ ಸಲು ಇರುವ ಕಾಲಮಿತಿಯನ್ನು ಕೈಬಿಡುವ ಜೊತೆಗೆ ಪಿಂಚಣಿ ಮೊತ್ತವನ್ನು 3 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಬೇಕು. ಕಾರ್ಮಿ ಕರ ಮಕ್ಕಳು ಶೈಕ್ಷಣಿಕ ಧನ ಸಹಾಯ ಪಡೆಯಲು ಉತ್ತೀರ್ಣರಾಗಿರಬೇಕೆಂಬ ಷರತ್ತು ಕೈಬಿಡಬೇಕು. ಇಎಸ್‍ಐ ಹಾಗೂ ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸ ಬೇಕು ಎಂದು ಒತ್ತಾಯಿಸಿದರು. ಸಂಘ ಟನೆ ಅಧ್ಯಕ್ಷ ಕೆ.ಎಸ್.ರೇವಣ್ಣ, ಉಪಾಧ್ಯಕ್ಷ ರಾದ ಎಂ.ಸಿದ್ದರಾಜು, ಶಿವಣ್ಣ, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಕಾರ್ಯದರ್ಶಿಗಳಾದ ವೈ. ಮಹ ದೇವಮ್ಮ, ಶಿವರಾಂ, ಹೊನ್ನೇಶ್, ಮುಜಾ ಹಿದ್ ಸೇರಿದಂತೆ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.