ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

November 24, 2019

ಮೈಸೂರು,ನ.23(ಎಂಟಿವೈ)- ದೆಹಲಿಯ ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಪೆÇಲೀಸರು ನಡೆಸಿರುವ ದೌರ್ಜನ್ಯ ಖಂಡಿಸಿ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧಕರ ಸಂಘ ದಲಿತ ವಿದ್ಯಾರ್ಥಿ ಒಕ್ಕೂಟದ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.ಮೈಸೂರು ವಿಶ್ವವಿದ್ಯಾನಿಲಯದ ಗ್ರಂಥಾಲಯದ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಧರಣಿ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಎಲ್ಲೆಡೆ ವಿದ್ಯಾರ್ಥಿ ಗಳ ಭವಿಷ್ಯ ಹಾಳು ಮಾಡುವತ್ತ ಮುಂದಾ ಗಿದೆ. ಕೇಂದ್ರ ಸರ್ಕಾರ ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಪೂರ್ವಾಗ್ರಹ ಪೀಡಿತವಾಗಿ ದೌರ್ಜನ್ಯ ನಡೆಸುತ್ತಿದೆ. ಉದ್ದೇಶಪೂರ್ವಕವಾಗಿ ಅಲ್ಲಿನ ವಿದ್ಯಾರ್ಥಿ ಗಳನ್ನೇ ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದೆ. ಪೂರ್ವ ಆಲೋಚನೆಯಿಲ್ಲದೆಯೇ ಶುಲ್ಕ ಹೆಚ್ಚಳ ಮಾಡಿರುವುದನ್ನು ಹಾಗೂ ಮೂಲಸೌಲಭ್ಯ ಕೊರತೆ ಖಂಡಿಸಿ ಪ್ರತಿ ಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೆÇಲೀಸರು ಲಾಠಿ ಪ್ರಹಾರ ನಡೆಸುವ ಮೂಲಕ ದೌರ್ಜನ್ಯ ನಡೆಸಿರುವುದು ಖಂಡನೀಯ. ಈ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾನಿ ರತರು ಆಗ್ರಹಿಸಿದರು.

ಜೆಎನ್‍ಯು ಹಾಸ್ಟೆಲ್ ಶುಲ್ಕ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು. ಉನ್ನತ ಶಿP್ಷÀಣದವರೆಗೂ ಉಚಿತ ಶಿP್ಷÀಣ ನೀಡಬೇಕು. ಜೆಎನ್‍ಯು ವಿದ್ಯಾರ್ಥಿಗಳ ಮೇಲಿನ ಎಲ್ಲ ಮೊಕದ್ದಮೆಗಳನ್ನು ಕೈಬಿಡ ಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲ ಸಂಘಟನೆಗಳು ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿ ಸುತ್ತವೆ ಎಂದು ಎಚ್ಚರಿಸಿದರಲ್ಲದೆ, ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರೈತರ ಮೇಲೆ, ಕಾರ್ಮಿಕರ ಮೇಲೆ, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿ ದೌರ್ಜನ್ಯ ಎಸಗಿತ್ತು. ಇದೀಗ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮತ್ತು ಹ¯್ಲÉ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಮುಖಂಡರಾದ ವಿನಯ್, ಭಾಗ್ಯಶ್ರಿ, ಮಹೇಶ್ ಹಲವಾರು ಮಂದಿ ಪಾಲ್ಗೊಂಡಿದ್ದರು.

Translate »