ತಮಿಳುನಾಡಿನ ವರ್ತನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ತಮಿಳುನಾಡಿನ ವರ್ತನೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

January 7, 2020

ಮೈಸೂರು,ಜ.6(ಎಂಟಿವೈ)- ಕರ್ನಾ ಟಕ ಧ್ವಜ ತೆಗೆದು ಹಾಕುವಂತೆ ತಮಿಳು ನಾಡಿನಲ್ಲಿ ರಾಜ್ಯದ ಪ್ರವಾಸಿ ವಾಹನ ಚಾಲಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಖಂಡಿಸಿ, ಪ್ರವಾಸಿ ಕನ್ನಡಿಗರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಮೈಸೂರಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು.

ಕೋಟೆ ಆಂಜನೇಯಸ್ವಾಮಿ ದೇವಾ ಲಯದ ಮುಂಭಾಗದಿಂದÀ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿ ಭಟನಾಕಾರರು, ವಾಹನಗಳ ಮೇಲೆ ಕನ್ನ ಡದ ಬಾವುಟ ಹಾರಿಸಿದ್ದಕ್ಕೆ ತಮಿಳು ನಾಡಿನ ಪೊಲೀಸರು ಉದ್ಧಟತನ ಪ್ರದ ರ್ಶಿಸಿ, ಹಲ್ಲೆ ನಡೆಸಿದ್ದಾರೆ. ಇದು ಪ್ರವಾಸಿ ಕನ್ನಡಿಗರ ಮೇಲೆ ಹಲ್ಲೆ ಹಾಗೂ ವಾಹನ ತಡೆದು ಕಿರುಕುಳ ನೀಡುವ ಅಲ್ಲಿನ ಸಂಘ ಟನೆಗಳ ಕಾರ್ಯಕರ್ತರನ್ನು ಪ್ರಚೋ ದಿಸಿದಂತಾಗಿದೆ. ಕಳೆದ ಎರಡು ವಾರದಲ್ಲಿ ಐದಾರು ಪ್ರಕರಣ ನಡೆದಿದೆ. ಈ ಹಿನ್ನೆಲೆ ಯಲ್ಲಿ ಹಲ್ಲೆ ನಡೆಸಿರುವ ಪೊಲೀಸರು ಹಾಗೂ ದಬ್ಬಾಳಿಕೆ ನಡೆಸುತ್ತಿರುವ ಕಿಡಿ ಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಪರಸ್ಪರ ಸಹಕಾರ, ಸೌಹಾರ್ದಯು ತವಾಗಿ ಇರಬೇಕಾದ ಎರಡು ರಾಜ್ಯದ ಜನರನ್ನು ಎತ್ತಿಕಟ್ಟುವ ಕೆಲಸವನ್ನು ಕೆಲವು ಕಿಡಿಗೇಡಿಗಳು ಮಾಡುತ್ತಿದ್ದಾರೆ. ತಮಿಳು ನಾಡಿನಲ್ಲಿ ಕಾನೂನು ಪಾಲಿಸಬೇಕಾದ ಅಧಿಕಾರಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿ ರುವುದು ಖಂಡನೀಯ. ಹಲ್ಲೆ ನಡೆಸಿದ ಕಿಡಿಗೇಡಿಗಳ ಮೇಲೆ ಕಾನೂನು ರೀತಿ ಯಲ್ಲಿ ಕ್ರಮ ಕೈಗೊಂಡು ಕರ್ನಾಟಕದ ವಾಹನ ಚಾಲಕರು ತಮಿಳುನಾಡಿನಲ್ಲಿ ನಿರಾತಂಕವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ರಾಜ್ಯಾ ದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಸೋಮೇ ಗೌಡ, ಪ್ರಧಾನ ಕಾರ್ಯದರ್ಶಿ ಹೇಮಂತ್ ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »