ಡೊನೇಷನ್ ಹಾವಳಿ ತಡೆಗೆ ಆಗ್ರಹಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಡೊನೇಷನ್ ಹಾವಳಿ ತಡೆಗೆ ಆಗ್ರಹಿಸಿ ಮೈಸೂರಲ್ಲಿ ಪ್ರತಿಭಟನೆ

April 27, 2018

ಮೈಸೂರು: ಖಾಸಗಿ ಶಾಲೆಗಳಲ್ಲಿನ ಡೊನೇಷನ್ ಮತ್ತು ಹೆಚ್ಚು ಬೋಧನಾ ಶುಲ್ಕದ ಹಾವಳಿಯನ್ನು ತಪ್ಪಿಸಲು ಜಿಲ್ಲಾಡಳಿತ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಜಿಲ್ಲಾ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಖಾಸಗಿ ಶಾಲೆಗಳು ಡೊನೇಷನ್ ರೂಪದಲ್ಲಿ ಲಕ್ಷಾಂತರ ರೂ.ಗಳನ್ನು ಪೆÇೀಷಕರಿಂದ ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿವೆ. ಕಟ್ಟಿದ ಹಣಕ್ಕೆ ರಶೀದಿ ಸಹ ನೀಡದೇ ವಂಚಿಸಲಾಗುತ್ತಿದೆ. ಶಿಕ್ಷಣದ ಹೆಸರಿನಲ್ಲಿ ವ್ಯಾಪಾರಕ್ಕೆ ಇಳಿದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾಡಳಿತ ಈ ಕೂಡಲೇ ಸಭೆ ಕರೆದು ಖಾಸಗಿ ಶಾಲೆಗಳ ಡೊನೇಷನ್ ಹಾವಳಿಯನ್ನು ತಡೆಗಟ್ಟುವುದಕ್ಕೆ ಕ್ರಮ ಕೈಗೊಳ್ಳಬೇಕು. ಶಾಲೆಗಳ ಸೂಚನಾ ಫಲಕದಲ್ಲಿ ಬೋಧನಾ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಆದೇಶಿಸಬೇಕು ಹಾಗೂ ಪೆÇೀಷಕರಿಂದ ಪಡೆದ ಹಣಕ್ಕೆ ರಶೀದಿ ನೀಡುವಂತೆ ನಿರ್ದೇಶನ ನೀಡಬೇಕು. ತಪ್ಪಿದ್ದಲ್ಲಿ ಶಾಲೆಯ ಮಾನ್ಯತೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಸರ್ಕಾರದ ನಿಯಮದಂತೆ ಶಾಲೆಗಳ ಸೂಚನಾ ಫಲಕದಲ್ಲಿ ಬೋಧನಾ ಶುಲ್ಕ ಹಾಗೂ ಶಾಲೆಯಲ್ಲಿ ಲಭ್ಯವಿರುವ ಸೀಟುಗಳ ವಿವರವನ್ನು ನಮೂದಿಸಬೇಕು. ಆದರೆ ಬಹುತೇಕ ಖಾಸಗಿ ಶಾಲೆಗಳು ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಶಿಕ್ಷಣದ ಹೆಸರಿನಲ್ಲಿ ಹಣ ಮಾಡಲು ತೊಡಗಿವೆ. ದೇಶಾದ್ಯಂತ ಏಕ ರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಿ ಪ್ರತಿ ಮಕ್ಕಳಿಗೂ ಉಚಿತ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸೇನಾ ಪಡೆಯ ಜಿ¯್ಲÁಧ್ಯP್ಷÀ ತೇಜೇಶ್‍ಲೋಕೇಶ್ ಗೌಡ, ಪಡೆಯ ಕಾರ್ಯಕರ್ತರಾದ ಪಿ.ಪ್ರಜೀಶ, ರವಿತೇಜ, ಜಗದೀಶ್, ಶಾಂತಮೂರ್ತಿ, ಮನುನಾಯಕ್, ಶಾಂತರಾಜೇ ಅರಸ್, ನಂಜುಂಡಸ್ವಾಮಿ, ಸುಬ್ಬೇಗೌಡ, ಬಿ.ಸುನಿಲï ಕುಮಾರ್, ಚೆಲುವರಾಜï, ಮಿನಿಬಂಗಾರಪ್ಪ, ಹರೀಶ್, ಗುರುಶಂಕರ್, ಸ್ವಾಮಿ, ವಿಜಯೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »