ಶಹೀನ್‍ಭಾಗ್ ಹೋರಾಟಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ಶಹೀನ್‍ಭಾಗ್ ಹೋರಾಟಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರಲ್ಲಿ ಪ್ರತಿಭಟನೆ

February 5, 2020

ಮೈಸೂರು,ಫೆ.4(ಪಿಎಂ)- ದೆಹಲಿಯ ಶಹೀನ್‍ಭಾಗ್‍ನಲ್ಲಿ ಸಿಎಎ ಹಾಗೂ ಎನ್‍ಆರ್‍ಸಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಎಐಎಂಎಸ್‍ಎಸ್ (ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆ)ಯಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

2 ತಿಂಗಳಿಂದ ಕಾಲೇಜು ವಿದ್ಯಾರ್ಥಿನಿಯರು, ಗೃಹಿಣಿಯರು ಶಹೀನ್‍ಭಾಗ್‍ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಪ್ರಶ್ನಿಸುತ್ತಿದ್ದಾರೆ. ಆದರೆ ಪ್ರತಿಭಟನಾನಿರತರ ದುಃಖ ಆಲಿಸಬೇಕಾದ ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ನಿರ್ಲಕ್ಷ್ಯ ವಹಿಸಿದ್ದಾರೆ. ಪ್ರತಿಭಟನಾಕಾರರನ್ನು ದೇಶ ದ್ರೋಹಿಗಳೆಂ ಬಂತೆ ಚಿತ್ರಿಸಲು ಷಡ್ಯಂತ್ರ ನಡೆಸಿದ್ದಾರೆ ಎಂದು ಕಿಡಿಕಾರಿದರು. ಹಿರಿಯ ರಂಗಕರ್ಮಿ ಪ್ರೊ.ರಾಮೇ ಶ್ವರಿ ವರ್ಮ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಪಿ.ಎಸ್.ಸಂಧ್ಯಾ, ಮೈಸೂರು ಜಿಲ್ಲಾ ಕಾರ್ಯದರ್ಶಿ ಜಿ.ಎಸ್.ಸೀಮಾ, ಜಂಟಿ ಕಾರ್ಯದರ್ಶಿ ಅಭಿಲಾಷ, ಪ್ರಗತಿಪರ ಚಿಂತಕಿ ಡಾ.ರತಿರಾವ್, ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಪ್ರತಿಭಟನೆಯಲ್ಲಿದ್ದರು.

Translate »