ಹಿಂದೂಪರ ಸಂಘಟನೆಗಳ ಪ್ರತಿಭಟನೆ: ಮನವಿ
ಶ್ರೀರಂಗಪಟ್ಟಣ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಖಂಡಿಸಿ ಪಟ್ಟಣದಲ್ಲಿ ಮೂಡಲ ಬಾಗಿಲು ಹನುಮ ಮಾಲೇ ಸಮಿತಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ಅಯ್ಯಪ್ಪಸ್ವಾಮಿ ದೇವ ಸ್ಥಾನದ ಮುಂಭಾಗ ಸಮಾವೇಶಗೊಂಡ ಸಮಿತಿಯ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಅಲ್ಲಿಂದ ಪಾದಯಾತ್ರೆ ನಡೆಸಿದರು. ಬಳಿಕ, ತಹಶೀ ಲ್ದಾರ್ ಕಚೇರಿಗೆ ತೆರಳಿ ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧಿಸಬೇಕು. ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು ಎಂದು ಉಪತಹಶೀಲ್ದಾರ್ ಸ್ವಾಮೀಗೌಡ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶಬರಿಮಲೆ ಅಯ್ಯಪ್ಪಸ್ವಾಮಿ ದೇವ ಸ್ಥಾನದ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ಆದೇಶ ವನ್ನು ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿದರು. ಮಹಿಳೆಯರಿಗಾಗಿ ಹಿಂದೂ ಸಂಪ್ರದಾಯದಲ್ಲಿ ಹಿಂದಿನಿಂದಲೂ ನಡೆಸಿಕೊಂಡು ಬಂದ ಧಾರ್ಮಿಕ ಪದ್ದತಿಗೆ ಈ ತೀರ್ಪು ವಿರುದ್ದವಾಗಿದೆ. ಪುರಾತನ ಕಾಲದಿಂದಲೂ ನಡೆದು ಬಂದ ಹಿಂದೂ ಸಂಪ್ರದಾಯಗಳಿಗೆ ಧಕ್ಕೆಯನ್ನುಂಟು ಮಾಡು ತ್ತಿದೆ. ಕೂಡಲೇ, ತೀರ್ಪನ್ನು ಹಿಂಪಡೆದು ಎಂದಿನಂತೆ ಈ ಹಿಂದೆ ಇದ್ದ ಮುಂದುವ ರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಸಂಚಾಲಕ ಚಂದನ್, ಜ್ಯೋತಿಷಿ ಡಾ.ಭಾನುಪ್ರಕಾಶ್ ಶರ್ಮ, ಲಕ್ಷ್ಮಿದೇವಿ ದೇವಾಲಯದ ಅರ್ಚಕ ಕೃಷ್ಣಭಟ್, ಶ್ರೀ ಚಾಮುಂಡೇಶ್ವರಿ ದೇವಾಲಯದ ಅರ್ಚಕ ಲಕ್ಷ್ಮೀಶ್, ವಕೀಲ ಬಾಲರಾಜು, ಮುಖಂಡರಾದ ಜಯಂತಿ, ರಾಘವೇಂದ್ರ, ಶರತ್, ಸಂಜು, ಪ್ರದೀಪ್ ಪಾಲ್ಗೊಂಡಿದ್ದರು.