ಮೈಸೂರು: ಎಐಟಿ ಯುಸಿ, ಸಿಐಟಿಯು, ಐಎನ್‍ಟಿಯು, ಅಂಗನ ವಾಡಿ ನೌಕರರ ಫೆಡರೇಷನ್ ಸೇರಿ ದಂತೆ ವಿವಿಧ ಸಂಘಟನೆಗಳ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.
ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಮ ಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿ ಭಟನಾಕಾರರು, ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. 18,000 ರೂ. ಕನಿಷ್ಠ ವೇತನ ನೀಡಬೇಕು. ಸಾರ್ವ ಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ಕಾರ್ಮಿಕ ಹಕ್ಕುಗಳ ಮೇಲಿನ ದಾಳಿ ನಿಲ್ಲಬೇಕು. ಬೆಲೆ ಏರಿಕೆ ನಿಯಂತ್ರಿ ಸಬೇಕು. ಕಾರ್ಮಿಕರಿಗೆ ಭದ್ರತೆ ಒದಗಿಸ ಬೇಕು ಇತ್ಯಾದಿ ಬೇಡಿಕೆಗಳ ಈಡೇರಿ ಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆಲ್ ಇಂಡಿಯಾ ಟ್ರೇಡ್ ಯೂನಿ ಯನ್ ಕಾಂಗ್ರೆಸ್ (ಎಐಟಿಯುಸಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಶೇಷಾದ್ರಿ, ಕೇಂದ್ರ ಸರ್ಕಾರ ಕಾರ್ಮಿ ಕರನ್ನು ಶೋಷಣೆ ಮಾಡುತ್ತಿದೆ. ಕಾರ್ಮಿಕ ವಿರೋಧಿ ನೀತಿಗಳನ್ನು ತಂದು ಕಾರ್ಮಿಕರ ಹಿತಕ್ಕೆ ಧಕ್ಕೆ ಉಂಟು ಮಾಡು ತ್ತಿದೆ. 18 ಸಾವಿರ ರೂ. ಕನಿಷ್ಠ ವೇತನ ಜಾರಿಗೊಳಿಸಬೇಕು. ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು. ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಫೆಡರೇಷನ್‍ನ ಮಹದೇವಮ್ಮ, ಪುಟ್ಟಮ್ಮ, ಭಾಗ್ಯ ಇನ್ನಿತರ ನೂರಾರು ಮಂದಿ ಭಾಗವ ಹಿಸಿದ್ದರು.