ಮೈಸೂರು ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ಮೈಸೂರು

ಮೈಸೂರು ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

September 8, 2018

ಮೈಸೂರು: ಮೈಸೂರು ಮಹಾನಗರಪಾಲಿಕೆ ಮೇಯರ್ ಸ್ಥಾನವನ್ನು ಈ ಬಾರಿ ಪರಿಶಿಷ್ಟ ಪಂಗಡಕ್ಕೆ ನೀಡಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲಾ ನಾಯಕ ಯುವಕರ ಸಂಘದ ಕಾರ್ಯಕರ್ತರು ಶುಕ್ರವಾರ ಮೈಸೂರು ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು.

ಮೈಸೂರು ಮಹಾನಗರಪಾಲಿಕೆ ಅಸ್ತಿತ್ವಕ್ಕೆ ಬಂದಾಗಿನಿಂದ ಇದುವರೆಗೂ ನಾಯಕ ಜನಾಂಗದ ಯಾರೊಬ್ಬರಿಗೂ ಮೇಯರ್ ಸ್ಥಾನ ದೊರೆತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ 50 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ನಾಯಕ ಸಮುದಾಯಕ್ಕೆ ಇದರಿಂದ ಅನ್ಯಾಯವಾಗಿದೆ. ಇದನ್ನು ಮನಗಂಡು ಸರ್ಕಾರ ನಾಯಕ ಜನಾಂಗದವರಿಗೆ ಮೇಯರ್ ಸ್ಥಾನ ನೀಡಬೇಕು. ರೋಸ್ಟರ್ ನಿಯಮಾವಳಿಗೆ ವಿರುದ್ಧವಾಗಿ ಪ್ರಕಟಿಸಿರುವ ಹಾಲಿ ಮೀಸಲಾತಿಯನ್ನು ರದ್ದುಪಡಿಸಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸುವ ಮೂಲಕ ನಾಯಕ ಸಮು ದಾಯಕ್ಕೆ ಮೇಯರ್ ಸ್ಥಾನ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ತಕ್ಷ ಪಡುವಾರಹಳ್ಳಿ ರಾಮಕೃಷ್ಣ, ವಿನೋದ್ ನಾಗವಾಲ, ಪುರುಷೋತ್ತಮನಾಯಕ, ಶ್ರೀಧರ್ ಚಾಮುಂಡಿಬೆಟ್ಟ, ಶಶಿಕಲಾ ಸರಸ್ವತಿ, ಲೋಕೇಶ್, ರಾಜು ಮಾರ್ಕೆಟ್ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »