ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
ಚಾಮರಾಜನಗರ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ

March 7, 2020

ಚಾಮರಾಜನಗರ, ಮಾ.6 (ಎಸ್‍ಎಸ್)- ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಅಂಗನವಾಡಿ ಹಾಗೂ ಕರ್ನಾ ಟಕ ಸೇನಾಪಡೆ ಕಾರ್ಯಕರ್ತರು ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಜೈಲ್ ಭರೋ ಚಳವಳಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಜಿಲ್ಲಾ ಅಂಗನವಾಡಿ ನೌಕರರು ನಗರದಲ್ಲಿ ಜೈಲ್ ಭರೋ ಚಳವಳಿ ನಡೆಸಿದರು.

ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಎದುರು ಜಮಾಯಿಸಿದ ಅಂಗನವಾಡಿ ಕಾರ್ಯ ಕರ್ತರು ಹಾಗೂ ನೌಕರರು, ಅಲ್ಲಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಪ್ರತಿಭಟ ನಾಕಾರರನ್ನು ತಡೆದಿದ್ದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪೊಲೀಸರು 50ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದು ಸ್ವಲ್ಪ ಸಮಯದ ಬಳಿಕ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು ಜಗತ್ತಿನ ಅರ್ಧಭಾಗ ದಷ್ಟಿರುವ (ಮಹಿಳೆಯರು) ನಾವು ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡು ತ್ತಿದ್ದೇವೆ. ಮಹಿಳೆಯರ ಕೆಲಸ ಮಾನ್ಯ ಮಾಡಿ, ಸಂಬಳವಿಲ್ಲದ ಕೆಲಸವನ್ನು ಜಿಡಿಪಿ ಲೆಕ್ಕಕ್ಕೆ ಸೇರಿಸಿ ಸಮಾನ ವೇತನ ನೀಡಬೇಕು ಎಂಬುದು ಸೇರಿದಂತೆ 45ನೇ ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನ(ಐಎಲ್‍ಸಿ) ಶಿಫಾರಸ್ಸನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Protest To fulfill the demand-1

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕೆ.ಸುಜಾತ, ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ, ಮುಖಂಡ ರಾದ ರೇವಮ್ಮ, ಮೀನಾ, ಶಾಂತಿ, ಅನಿತಾ, ರಾಜಮ್ಮ ಸೇರಿದಂತೆ ಇನ್ನಿತರರಿದ್ದರು.

ಅರಬೆತ್ತಲೆ ಪ್ರತಿಭಟನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಚಾ.ನಗರ ಜಿಲ್ಲೆ ಕಡೆಗಣನೆ ಖಂಡಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಡಳಿತ ಭವನದ ಗೇಟ್ ಎದುರು ಜಮಾಯಿಸಿದ ಪ್ರತಿಭಟನಾಕಾ ರರು ತಮ್ಮ ಅಂಗಿ ಕಳಚಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ, ಈ ಸಾಲಿನ ಬಜೆಟ್ ನಲ್ಲಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿ ಸುವುದು, ಪ್ರವಾಸೋದ್ಯಮ ಪುನಶ್ಚೇತನ, ಕಾರ್ಖಾನೆ ಸ್ಥಾಪನೆ ಹಾಗೂ ಕನ್ನಡ ಭವನ ಸ್ಥಾಪನೆಗಾಗಿ ಸಾಕಷ್ಟು ಅನುದಾನ ನಿರೀಕ್ಷಿಸಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ನಮ್ಮ ನಿರೀಕ್ಷೆ ಹುಸಿ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‍ಕುಮಾರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಬಜೆಟ್‍ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅನು ದಾನ ತರಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆ ಗೌರವಾಧ್ಯಕ್ಷ ಶಾ.ಮುರಳಿ, ಪ್ರಧಾನ ಕಾರ್ಯದರ್ಶಿ ರಾಜ್‍ಗೋಪಾಲ್, ರಾಜು, ಗೋವಿಂದರಾಜು, ನಂಜುಂಡಸ್ವಾಮಿ, ಎಂಡಿಆರ್ ಸ್ವಾಮಿ, ನಟರಾಜು, ತಾಂಡವ ಮೂರ್ತಿ, ವೀರಭದ್ರ, ಮಂಜು ಇತರರಿದ್ದರು.

Translate »