ಕಾವೇರಿ ಪ್ರಾಧಿಕಾರ ರಚನೆ ವಿರೋಧಿಸಿ ವಾಟಾಳ್ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ
ಮೈಸೂರು

ಕಾವೇರಿ ಪ್ರಾಧಿಕಾರ ರಚನೆ ವಿರೋಧಿಸಿ ವಾಟಾಳ್ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ

June 4, 2019

ಮೈಸೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮಾಜಿ ಶಾಸಕ, ಹಿರಿಯ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಅವರು ಸೋಮವಾರ ಮೈಸೂರು ರೈಲ್ವೆ ನಿಲ್ದಾಣದ ಬಳಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

ಪ್ರಾಧಿಕಾರ ರಚನೆಯಿಂದ ಕರ್ನಾಟಕಕ್ಕೆ ನಿರಂತರ ವಾಗಿ ಅನ್ಯಾಯವಾಗಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮೌನವಾಗಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿದರು. ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಪ್ರಾಧಿಕಾರ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು. ಕೇಂದ್ರದ ತ್ರಿಭಾಷಾ ಶಿಕ್ಷಣ ನೀತಿಗೂ ಆಕ್ರೋಶ ವ್ಯಕ್ತಪಡಿಸಿದ ಅವರು, ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರಿಕೆಗೆ ನಮ್ಮ ಸಂಪೂರ್ಣ ವಿರೋಧವಿದೆ. ನಮಗೆ ಕನ್ನಡ ಸಾಕು. ಕೇಂದ್ರ ಸರ್ಕಾರ ಈ ನೀತಿಯನ್ನು ಜಾರಿಗೊಳಿ ಸಲು ಮುಂದಾದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

Translate »