ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಮೈಸೂರು

ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

September 6, 2019

ಮೈಸೂರು, ಸೆ.5(ಪಿಎಂ)- ಕೇಂದ್ರದ ಬಿಜೆಪಿ ಸರ್ಕಾರ ಕಾರ್ಪೋರೇಟ್ ಪರ ವಾಗಿದ್ದು, ಕಾರ್ಮಿಕರು ಹಾಗೂ ರೈತರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸೆಂಟರ್ ಆಫ್ ಇಂಡಿಯನ್ ಟ್ರೆಡ್ ಯೂನಿಯನ್ (ಸಿಎಟಿಯು) ಹಾಗೂ ಆಲ್ ಇಂಡಿಯಾ ಕಿಸಾನ್ ಸಭಾ ಜಂಟಿ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾ ಕಾರರು, ಕೇಂದ್ರ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಪ್ರಯತ್ನದಿಂದ ಸರ್ಕಾರ ಹಿಂದೆ ಸರಿಯಬೇಕು. ಅಸಂಘ ಟಿತ, ಸಂಘಟಿತ ಹಾಗೂ ಯೋಜನಾ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ ವನ್ನು 18,000 ರೂ. (2016ರ ಬೆಲೆ ಸೂಚ್ಯಂಕದ ಆಧಾರದಲ್ಲಿ)ಗೆ ಹೆಚ್ಚಿಸಿ, ತುಟ್ಟಿಭತ್ಯೆಯನ್ನೂ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ದೇಶದ ಯುವ ಜನತೆಯ ಉದ್ಯೋಗ ಕಸಿಯುತ್ತಿರುವ ಗುತ್ತಿಗೆ ಹಾಗೂ ತರಬೇತಿ ನೇಮಕ ಪದ್ಧತಿ ರದ್ದುಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಯಾಗಿರುವ ಉದ್ಯೋಗಗಳ ನೇಮಕಾತಿಗೆ ಕ್ರಮ ವಹಿಸಬೇಕು. ಖಾಸಗಿ ವಲಯದಲ್ಲಿ ಖಾಯಂ ಉದ್ಯೋಗ ಸೃಷ್ಟಿಯನ್ನು ಖಾತರಿ ಗೊಳಿಸುವ ನೀತಿಗಳನ್ನು ಜಾರಿಗೊಳಿಸ ಬೇಕು ಎಂದು ಒತ್ತಾಯಿಸಿದರು.

ರಾಜ್ಯದ ನೆರೆ ಹಾವಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೊದಲ ಕಂತಾಗಿ 10 ಸಾವಿರ ಕೋಟಿ ರೂ. ಪರಿಹಾರ ನೀಡ ಬೇಕು. ಪರಿಹಾರ ವಿತರಣೆ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ತಳ ಮಟ್ಟ ದಲ್ಲಿ ಜನಪ್ರತಿನಿಧಿಗಳ, ಸಂಘ-ಸಂಸ್ಥೆಗಳ ಉಸ್ತುವಾರಿ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ, ಆಲ್ ಇಂಡಿಯಾ ಕಿಸಾನ್ ಸಭಾ ಪ್ರಧಾನ ಕಾರ್ಯ ದರ್ಶಿ ಜಗದೀಶ್ ಸೂರ್ಯ ಸೇರಿದಂತೆ ಎರಡೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Translate »