ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

April 23, 2019

ಮೈಸೂರು: ರಾಯಚೂರು ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾ ನಾಸ್ಪದ ಸಾವು ಪ್ರಕರಣ ಸಂಬಂಧ ಸೂಕ್ತ ತನಿಖೆಗೆ ಒತ್ತಾಯಿಸಿ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಮೈಸೂರು ನಗರದಲ್ಲಿ ಸೋಮವಾರ ಪ್ರತ್ಯೇಕ ಮೂರು ಪ್ರತಿಭಟನೆಗಳು ನಡೆದವು.

ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಜಮಾಯಿಸಿದ ಗಂಧದ ಗುಡಿ ಫೌಂಡೇಷನ್ ಕಾರ್ಯಕರ್ತರು, ಮಧು ಪತ್ತಾರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ತನಿಖೆ ಪೂರ್ಣಗೊಳಿಸಿ ಕೃತ್ಯ ನಡೆಸಿದ ಪಾತಕಿಗಳನ್ನು ಗಲ್ಲಿಗೇರಿಸಬೇಕು. ಇಂತಹ ಕಠಿಣ ಶಿಕ್ಷೆ ವಿಧಿಸದಿದ್ದಲ್ಲಿ ಇಂತಹ ಕೃತ್ಯಗಳು ಮರುಕಳಿಸಲಿವೆ. ಆಗ ನಮ್ಮ ಸಮಾಜ ದಲ್ಲಿ ಹೆಣ್ಣು ಮಕ್ಕಳು ಮನೆಯಿಂದ ಹೊರ ಹೋಗುವುದೇ ಕಷ್ಟಕರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಧು ಹತ್ಯೆ ಮಾಡಿದ ಪಾತಕಿಗಳನ್ನು ಗಲ್ಲಿಗೇರಿಸುವ ಮೂಲಕ ಆಕೆಯ ಕುಟುಂ ಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದರು. ಫೌಂಡೇಷನ್ ಅಧ್ಯಕ್ಷ ಆರ್ಯನ್, ಕಾರ್ಯಕರ್ತರಾದ ಸಂತೋಷ್, ಮಿಂಚು, ನೈನಾಗೌಡ, ಮನೋಜ್‍ಗೌಡ ಮತ್ತಿತ ರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಾನೂನು ವಿದ್ಯಾರ್ಥಿಗಳು: ದೇಶದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಯಾಗಬೇಕೆಂದು ಆಗ್ರಹಿಸಿ ಮೈಸೂರು ನಗರ ಕಾನೂನು ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಎದುರು ಪ್ರತಿಭಟನೆ ನಡೆಸ ಲಾಯಿತು. ಏಪ್ರಿಲ್ 20ರಂದು ನ್ಯಾ. ರಂಜನ್ ಗೊಗೋಯ್ ವಿರುದ್ಧ ಮಹಿಳೆ ಯೊಬ್ಬರು ಲೈಂಗಿಕ ಕಿರುಕುಳ ನೀಡಿರುವು ದಾಗಿ ಆರೋಪಿಸಿದ್ದಾರೆ. ವಿಚಾರಣೆ ಹಂತದಲ್ಲಿರುವ ಪ್ರಕರಣವೊಂದರ ದಿಕ್ಕು ತಪ್ಪಿಸಲು ಈ ರೀತಿ ಸುಳ್ಳು ಆರೋಪ ಮಾಡಲಾಗಿದೆ ಎಂದು ಸ್ವತಃ ನ್ಯಾ. ರಂಜನ್ ಗೊಗೋಯ್ ಹೇಳಿಕೊಂಡಿ ದ್ದಾರೆ. ಹೀಗಾಗಿ ಮೇಲ್ನೋಟಕ್ಕೆ ಈ ಆರೋಪ ಷಡ್ಯಂತ್ರದಿಂದ ಕೂಡಿದಂತಿದೆ. ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿ ದ್ದರೂ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ದೇಶದ ನ್ಯಾಯಾಂಗ ವ್ಯವಸ್ಥೆಗೆ ತನ್ನದೇ ಆದ ಘನತೆ-ಗೌರವ ಇದ್ದು, ಯಾವುದೇ ಕಾರಣಕ್ಕೂ ಅದು ಕುಗ್ಗುವಂತಾಗ ಬಾರದು. ಸದರಿ ಆರೋಪದಿಂದ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣಗಳ ವಿಲೇ ವಾರಿ ಮಾಡಲು ಯಾವುದೇ ತೊಡಕು ಉಂಟಾಗಬಾರದು ಎಂದು ಆಗ್ರಹಿಸಿ ದರು. ಹೋರಾಟಗಾರ ಲಾ.ಜಗನ್ನಾಥ್, ಒಕ್ಕೂಟದ ಮುಖಂಡರಾದ ಎನ್.ಪುನೀತ್, ಜಯಶಂಕರ್, ಆರ್.ಅವಿನಾಶ್, ಸುರೇಶ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬ್ರಾಹ್ಮಣ ಸಂಘ: ಸಚಿವ ಸತೀಶ್ ಜಾರಕಿಹೊಳಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾ ರರು, ಏ.16ರಂದು ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನ ಕಾರಿ ಹೇಳಿಕೆ ನೀಡಿದ್ದಾರೆ. ದೇಶದ ಸೇನೆ ಯಲ್ಲಿ ದಲಿತರು, ಹಿಂದುಳಿದವರು ದೇಶ ಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆಯೇ ಹೊರತು ಬ್ರಾಹ್ಮಣ ಸಮುದಾಯದವರು ಪ್ರಾಣತೆತ್ತ ಇತಿಹಾಸವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆ ಮೂಲಕ ಅವರು ಚುನಾ ವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಸಂಘಟನಾ ಕಾರ್ಯ ದರ್ಶಿ ಬಾಲಕೃಷ್ಣ, ನಗರ ಪಾಲಿಕೆ ಮಾಜಿ ಸದಸ್ಯೆ ಸೌಭಾಗ್ಯ ಮೂರ್ತಿ, ಸಮುದಾಯದ ಮುಖಂಡರಾದ ವಿಕ್ರಂ ಅಯ್ಯಂಗಾರ್, ಅಜಯ ಶಾಸ್ತ್ರಿ ಮತ್ತಿತರರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.

Translate »