ಮೈಸೂರು,ಜು.19(ಪಿಎಂ)- ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುವ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲಾ ಕನ್ನಡ ಚಳು ವಳಿಗಾರರ ಸಂಘದ ವತಿಯಿಂದ ಸೋಮ ವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ ಗಳಾದ ಡಾ.ಸಿಪಿಕೆ (ಸಿ.ಪಿ.ಕೃಷ್ಣಕುಮಾರ್), ಪ್ರೊ.ಕೆ.ಎಸ್.ಭಗವಾನ್ ಸಹ ಪಾಲ್ಗೊಂಡು, ತಮ್ಮ ಬೆಂಬಲ ವ್ಯಕ್ತಪಡಿಸಿದರು.
ಆರ್‍ಬಿಐ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಆದರೆ ರಾಜ್ಯದಲ್ಲಿ ಇದನ್ನು ಜಾರಿಗೊಳಿಸದೇ ಕೇಂದ್ರ ಸರ್ಕಾರ ಕನ್ನಡ ವಿರೋಧಿ ನಿಲುವನ್ನು ತಾಳಿದೆ ಎಂದು ಆರೋಪಿಸಿದರು.
ರಾಜ್ಯದ ಕೆನರಾ ಬ್ಯಾಂಕ್ ಸೇರಿದಂತೆ ಒಟ್ಟು 11 ಬ್ಯಾಂಕುಗಳಲ್ಲಿ ಖಾಲಿ ಇರುವ 3 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ನಡೆಸಲು ಮುಂದಾಗಿ, ಕನ್ನಡಿಗರು ಉದ್ಯೋಗದಿಂದ ವಂಚಿತ ರಾಗುವಂತೆ ಮಾಡಲಾಗುತ್ತಿದೆ. ರಾಜ್ಯ ದಿಂದ ಆಯ್ಕೆಯಾದ 25 ಬಿಜೆಪಿ ಸಂಸ ದರು ಈ ಬಗ್ಗೆ ಧ್ವನಿ ಎತ್ತದೇ ಮೌನಕ್ಕೆ ಶರಣಾಗಿದ್ದಾರೆ.
ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಯಾದ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸದೇ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಖಂಡಿಸಿದರು.
ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಸಮಾಜ ಸೇವಕ ರಘುರಾಂ ವಾಜ ಪೇಯಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.