ಡಿ.ಕೆ.ಶಿವಕುಮಾರ್ ಬೆಂಬಲಿಸಿ ಬೆಂಗಳೂರಲ್ಲಿ ಒಕ್ಕಲಿಗರ ಪ್ರತಿಭಟನೆ
ಮೈಸೂರು

ಡಿ.ಕೆ.ಶಿವಕುಮಾರ್ ಬೆಂಬಲಿಸಿ ಬೆಂಗಳೂರಲ್ಲಿ ಒಕ್ಕಲಿಗರ ಪ್ರತಿಭಟನೆ

September 12, 2019

ಬೆಂಗಳೂರು,ಸೆ.11(ಕೆಎಂಶಿ)- ಸಮುದಾಯದ ಮುಖಂಡರನ್ನು ದಮನ ಮಾಡುವ ಕೇಂದ್ರದ ನೀತಿ ವಿರೋಧಿಸಿ ಒಕ್ಕಲಿಗರ ವಿವಿಧ ಸಂಘ ಸಂಸ್ಥೆ ಗಳು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿ ದವು. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಮೂಲಕ ಸಮುದಾಯದ ಉದ್ಯಮಿ ಹಾಗೂ ರಾಜಕೀಯ ಮುಖಂಡರನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಗರದ ನ್ಯಾಷನಲ್ ಕಾಲೇಜು ಮೈದಾನದಿಂದ ಮೆರವಣಿಗೆಯಲ್ಲಿ ಸಾಗಿ ಫ್ರೀಡಂ ಪಾರ್ಕ್‍ನಲ್ಲಿ ಸಮುದಾಯದ ಲಕ್ಷಾಂತರ ಜನ ಸಮಾವೇಶಗೊಂಡು ಒಗ್ಗಟ್ಟು ಪ್ರದರ್ಶಿಸಿದರು.

ಸುಮಾರು 1 ಕಿಲೋ ಮೀಟರ್ ಉದ್ದದಷ್ಟು ಜನ, ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ, ಉದ್ಯಮಿ ವಿ.ಜಿ.ಸಿದ್ಧಾರ್ಥ್ ಸಾವು, ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಬಂಧನ, ಮುಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಹಗರಣಗಳಲ್ಲಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ದೂರಿದರು. ರಾಜಕೀಯ ದ್ವೇಷಕ್ಕಾಗಿ ನಮ್ಮ ಸಮುದಾಯದ ನಾಯಕರನ್ನೇ ಏಕೆ ಗುರಿ ಮಾಡಿ ದ್ದೀರಿ ಎಂದು ಸಮಾವೇಶದಲ್ಲಿ ಭಾಷಣಕಾರರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ತಮ್ಮ ಮುಖಂಡರಿಗೆ ನೀಡುತ್ತಿರುವ ಕಿರುಕುಳ ವಿರೋಧಿಸಿ, ನಾವು ನ್ಯಾಯಕ್ಕಾಗಿ ಹೋರಾಟ ಮಾಡು ತ್ತೇವೆ, ಕಾನೂನು ಅವರ ಅಪ್ಪನದಲ್ಲ, ಆದರೆ ಅದ ಕ್ಕಿಂತ ಮಿಗಿಲಾಗಿ ಕೇಂದ್ರ
ಸರ್ಕಾರ ಪಕ್ಷಪಾತ ರೀತಿ ವರ್ತಿಸುತ್ತಿದೆ ಎಂದು ದೂರಿದರು. ನಂತರ ಸಮುದಾಯದ ಮುಖಂಡರು ರಾಜ ಭವನಕ್ಕೆ ತೆರಳಿ ಕೇಂದ್ರದ ನೀತಿ ಖಂಡಿಸಿ ಮನವಿ ಪತ್ರ ಸಲ್ಲಿಸಿ ದರು. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೆರವಣಿಗೆ ಆರಂಭಕ್ಕೂ ಮುನ್ನ ಜನತೆಯನ್ನುದ್ದೇ ಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಮಾಜಿ ಸಚಿವ ಕೃಷ್ಣಬೈರೇಗೌಡ, ಕೇಂದ್ರ ಸರ್ಕಾರ ಹೇಡಿ ರಾಜಕಾರಣ ಮಾಡುತ್ತಿದೆ. ಎಂದರು. ಐಟಿ, ಸಿಬಿಐ, ಇಡಿಯಲ್ಲಿ ಬಿಜೆಪಿಯ ಸೀಳು ನಾಯಿಗಳಿವೆ, ಚುನಾವಣಾ ರಣರಂಗದಲ್ಲಿ ಪ್ರತಿಪಕ್ಷಗಳನ್ನು ಎದುರಿಸಲಾಗದೇ ವಾಮ ಮಾರ್ಗದ ಮೂಲಕ ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಎದುರಿಸಲಾಗದೇ ಬಂಧಿಸಲಾಗಿದೆ. ವಿಜಯ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಮೇಲೆ ಐಟಿ, ಇಡಿ ದಾಳಿ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸಿದ್ಧಾರ್ಥ ಸಾವು ಆತ್ಮಹತ್ಯೆಯಲ್ಲ, ಐಟಿ ಇಲಾಖೆ ಮೂಲಕ ಮಾಡಿಸಿದ ಕೊಲೆ ಎಂದು ಆರೋಪಿಸಿದರು. ಕೇವಲ 5 ಕೋಟಿ ರೂ.ಗೆ ಮಾತ್ರ ಲೆಕ್ಕ ಕೊಡಬೇಕು, ಅದಕ್ಕೆ ಅವರು ಲೆಕ್ಕ ಕೊಡು ತ್ತಾರೆ, ವಿಜಯಮಲ್ಯ ದೇಶಬಿಟು ್ಟಓಡಿಹೋದಾಗ ಬಿಜೆಪಿಯ ನಾಯಕರು ಎಲ್ಲಿದ್ದರು. ಬಿಜೆಪಿಯದ್ದು ಹೇಡಿ ರಾಜಕಾರಣ, ಅವರ ಬೆದರಿಕೆಗಳಿಗೆ ನಾವ್ಯಾರು ಜಗ್ಗುವುದಿಲ್ಲ, ಪ್ರತಿಭಟನೆಯಲ್ಲಿ ಕೇವಲ ಒಕ್ಕಲಿಗ ಸಮುದಾಯವಷ್ಟೇ ಇಲ್ಲ, ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರೂ ಇದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಸಿದು, ನಿರು ದ್ಯೋಗ ಪ್ರಮಾಣ ಹೆಚ್ಚಳವಾಗಿದ್ದರೂ ಬಿಜೆಪಿ ಮಾತ್ರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದರು. ಶಿವಕುಮಾರ್ ತನಿಖೆಗೆ ಸಹಕರಿಸಿದರೂ, ಅವರನ್ನು ಬಂಧಿಸಿ ಹೇಡಿತನದ ಕೆಲಸ ಮಾಡುತ್ತಿದೆ, ಅವರ ಮಗಳಿಗೂ ನೋಟಿಸ್ ನೀಡಿ ತೇಜೋವಧೆ ಮಾಡುವ ಕೆಲಸ ನಡೆದಿದೆ ಎಂದರು. ಕರವೇ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ಪಕ್ಷ ಕೈ ಬಿಟ್ಟರೂ ಶಿವಕುಮಾರ್ ಅವರನ್ನು ಸಮುದಾಯ ಕೈಬಿಡಲ್ಲ, ಸಮುದಾಯ ಇದ್ದರೆ ಮಾತ್ರ ಪಕ್ಷ ಎಂದು ತಿಳಿಸಿದರು. ಪ್ರತಿಭಟನೆಗೆ ಆಗಮಿಸಿದ ಒಂದು ಗುಂಪಿನಿಂದ ಚಲುವರಾಯಸ್ವಾಮಿ ಭಾಷಣಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಅರ್ಧಕ್ಕೆ ಮಾತು ಮೊಟಕುಗೊಳಿಸಿ ತೆರಳಿದರು.

ಡಿಕೆಶಿ ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ
ಬೆಂಗಳೂರು: ನವದೆಹ ಲಿಯ ತಮ್ಮ ನಿವಾಸದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ಜಾರಿ ನಿರ್ದೇಶನಾ ಲಯ ನೀಡಿದ್ದ ಸಮನ್ಸ್ ರದ್ದು ಗೊಳಿಸಲು ನಿರಾಕರಿಸಿದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಶಾಸಕ ಡಿ.ಕೆ.ಶಿವ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.16ಕ್ಕೆ ಮುಂದೂಡಿದೆ. ಮೇಲ್ಮ ನವಿ ಅರ್ಜಿ ವಿಚಾರಣೆಗೆ ಬಂದಾಗ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಇದೇ ಪ್ರಕರಣಕ್ಕೆ ಸಂಬಂಧಿಸಿದ ಇತರ ಅರ್ಜಿಗಳು ಸೆ.16ರಂದು ವಿಚಾರಣೆಗೆ ಬರುವುದರಿಂದ ಇದನ್ನೂ ಅಂದೇ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನವದೆಹಲಿಯ ಮನೆಯಲ್ಲಿ 8.6 ಕೋಟಿ ರೂ. ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದರಿಂದ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. 4 ದಿನಗಳ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

Translate »