ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹದ ಸೌಲಭ್ಯ ಕಲ್ಪಿಸಿ
ಮೈಸೂರು

ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹದ ಸೌಲಭ್ಯ ಕಲ್ಪಿಸಿ

January 13, 2022

ಮೈಸೂರು,ಜ.12(ಪಿಎಂ)- ಸ್ಥಳೀಯ ಸಂಸ್ಥೆ ಗಳ ಪೌರಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಸಂಬಂಧ ಐಪಿಡಿ ಸಾಲಪ್ಪ ಸಮಿತಿ ಶಿಫಾರಸ್ಸು ಗಳನ್ನು ಅನುಷ್ಠಾನಗೊಳಿಸಲು ಹಾಗೂ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ಇದೇ ಮಾರ್ಚ್ ಒಳಗೆ ಕಲ್ಪಿಸಬೇಕೆಂದು ಮಾಜಿ ಸಚಿ ವರೂ ಆದ ಕರ್ನಾಟಕ ರಾಜ್ಯ ಸಫಾಯಿ ಕರ್ಮ ಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಐಪಿಡಿ ಸಾಲಪ್ಪ ನವರ ಸಮಿತಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿ ಸುವ ಕುರಿತಂತೆ ನಗರಾಭಿವೃದ್ಧಿ ಇಲಾಖೆ, ಗ್ರಾಮೀ ಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಮುಖ್ಯಸ್ಥರೊಂ ದಿಗೆ ಸಭೆ ನಡೆಸಿ ಅವರು ನಿರ್ದೇಶನ ನೀಡಿದರು.

1977-78ರಲ್ಲಿ ಐಪಿಡಿ ಸಾಲಪ್ಪನವರ ಸಮಿತಿ ಇಡೀ ರಾಜ್ಯದಲ್ಲಿ ಸಂಚರಿಸಿ ಪೌರಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಶಿಫಾ ರಸ್ಸಿನ ವರದಿ ನೀಡಿತ್ತು. ಪೌರಕಾರ್ಮಿಕರ ಬಗ್ಗೆ ಅಧ್ಯಯನ ನಡೆಸಿದ್ದ ಈ ವರದಿಯಲ್ಲಿ 96 ಅಂಶ ಗಳನ್ನು ಶಿಫಾರಸ್ಸು ಮಾಡಲಾಗಿತ್ತು. ಈ ಪೈಕಿ 36 ಅಂಶಗಳನ್ನು ಅನುಷ್ಠಾನಗೊಳಿಸಲು ಅಂದು ವಿಧಾನಸಭೆ ಮತ್ತು ವಿಧಾನಪರಿಷತ್ ಎರಡ ರಲ್ಲೂ ನಿರ್ಣಯಿಸಲಾಗಿತ್ತು. ಆದರೆ ಈವರೆಗೆ ಸಮರ್ಪಕ ಅನುಷ್ಠಾನವಾಗಿಲ್ಲ. ಎಲ್ಲಾ 36 ಅಂಶಗಳನ್ನೂ ಅನುಷ್ಠಾನಗೊಳಿಸಲು ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ನಿರಂತರವಾಗಿ ವರ್ಷ ಕಾಲ ಕರ್ತವ್ಯ ನಿರ್ವಹಿಸಿದ್ದರೆ, ಅಂತಹ ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕೆಂದು ಸಾಲಪ್ಪ ನವರು ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆಯೂ ಪರಿಶೀಲಿಸಿ, ಸೂಕ್ತ ಕ್ರಮ ವಹಿಸಬೇಕು ಎಂದರು.

ಬೆಂಗಳೂರು ಬಿಬಿಎಂಪಿ ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರೊಬ್ಬರನ್ನು ಸದಸ್ಯರಾಗಿ ನಾಮನಿರ್ದೇಶನ ಮಾಡಬೇಕೆಂದು 2018ರಲ್ಲಿ ಅಂದಿನ ಸರ್ಕಾರ ಬಜೆಟ್‍ನಲ್ಲಿ ಘೋಷಣೆ ಮಾಡಿದೆ ಎಂದು ತಿಳಿಸಿದ ಅಧ್ಯಕ್ಷರು, ಇದರ ಅನುಷ್ಠಾನ ಸಂಬಂಧ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಡೀ ರಾಜ್ಯ ದಲ್ಲಿ ಪೌರಕಾರ್ಮಿಕರು ಬೀದಿಯಲ್ಲಿ ಕೂತು ತಿಂಡಿ- ಊಟ ಮಾಡುವ ಪರಿಸ್ಥಿತಿ ಇದೆ. ಅವರಿಗೆ ಶೌಚಾ ಲಯ ಸೌಲಭ್ಯವೂ ಇಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿಶ್ರಾಂತಿ ಗೃಹಗಳನ್ನು ಇದೇ ಮಾರ್ಚ್ ಒಳಗೆ ಕಲ್ಪಿಸಲು ತ್ವರಿತವಾಗಿ ಕ್ರಮ ವಹಿಸಬೇಕೆಂದು ಎಂದು ನಿರ್ದೇಶನ ನೀಡಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಪೌರಾಡಳಿತ ನಿರ್ದೇಶನಾ ಲಯದ ನಿರ್ದೇಶಕರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Translate »