ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ತಾಕೀತು
ಚಾಮರಾಜನಗರ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಿಗುವ ಎಲ್ಲ ಯೋಜನೆಗಳು ಹಾಗೂ ಮೂಲ ಸೌಲಭ್ಯಗಳನ್ನು ಅಧಿಕಾರಿಗಳು ಸಮರ್ಪಕ ವಾಗಿ ತಲುಪಿಸಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಅವರು ತಾಕೀತು ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಇಂದು ಸಫಾಯಿ ಕರ್ಮಚಾರಿ ಗಳ ಕುಂದು ಕೊರತೆ ಹಾಗೂ ಸಫಾಯಿ ಕರ್ಮಚಾರಿಗಳ ಸೌಲಭ್ಯಗಳ ಕಾರ್ಯ ಕ್ರಮ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಸಫಾಯಿ ಕರ್ಮಚಾರಿಗಳ ಕಲ್ಯಾ ಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ. ಇವುಗಳನ್ನು ಸಫಾಯಿ ಕರ್ಮಚಾರಿಗಳಿಗೆ ಹೊಣೆಗಾರಿಕೆಯಿಂದ ತಲುಪಿಸಬೇಕು. ಕಾರ್ಯಕ್ರಮಗಳು ಫಲಾನು ಭವಿಗಳಿಗೆ ಹೇಗೆ ಅನುಕೂಲವಾಗುತ್ತಿವೆ ಎಂಬ ಬಗ್ಗೆ ಆಯೋಗ ಪರಿಶೀಲಿಸುತ್ತಿದೆ ಎಂದರು.
ಸಫಾಯಿ ಕರ್ಮಚಾರಿಗಳ ಆರೋಗ್ಯ, ಸುರಕ್ಷತಾ ಕ್ರಮಗಳು, ವಿಮೆ ಮುಂತಾದ ಸೌಕರ್ಯಗಳನ್ನು ಯಾವುದೇ ಕೊರತೆ ಬಾರ ದಂತೆ ಕಲ್ಪಿಸಬೇಕಿದೆ. ಈ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸಿದರೆ ಗಂಭೀರ ಕ್ರಮ ವಹಿಸ ಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಫಾಯಿ ಕರ್ಮಚಾರಿಗಳ ವೇತನವನ್ನು ಕಡಿಮೆ ಮಾಡಬಾರದು. ಕನಿಷ್ಠ ವೇತನ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡ ಬೇಕು. ಭವಿಷ್ಯ ನಿಧಿ, ಇ.ಎಸ್.ಐ ಕಡ್ಡಾಯ ವಾಗಿ ನೀಡಬೇಕು. ಈ ಸೌಕರ್ಯಗಳನ್ನು ನೀಡದೆ ಇರುವ ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಗದೀಶ್ ಹಿರೇಮಣಿ ಅವರು ತಿಳಿಸಿದರು.
ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಿ ಸಿಕೊಡಬೇಕು. ನಿವೇಶನ ಲಭ್ಯವಿಲ್ಲದಿದ್ದಲ್ಲಿ ನಿವೇಶನವನ್ನು ಗುರುತಿಸಿ ಮನೆ ನಿರ್ಮಿಸಿ ಕೊಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಮಕ್ಕಳ, ಅವಲಂಬಿತರ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಬೇಕು ಎಂದರು.
ಪೌರಕಾರ್ಮಿಕರ ನೇಮಕಾತಿ ಸೇರಿ ದಂತೆ ವಿವಿಧ ವಿಷಯಗಳನ್ನು ವಿವರವಾಗಿ ಸಭೆಯಲ್ಲಿ ಚರ್ಚಿಸಲಾಯಿತು. ನಗರಸಭೆ ಸದಸ್ಯರಾದ ಆರ್.ಪಿ.ನಂಜುಂಡಸ್ವಾಮಿ, ಮಹೇಶ್, ಮುಖಂಡರಾದ ಸಿ.ಕೆ.ಮಂಜು ನಾಥ್, ಅರಕಲವಾಡಿ ನಾಗೇಂದ್ರ, ಸಿ.ಎಂ. ಕೃಷ್ಣಮೂರ್ತಿ, ಕದಂಬ ಅಂಬರೀಶ್, ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಸದಸ್ಯ ರಾದ ಪುಷ್ಪಲತಾ ಮತ್ತಿತರರು ಮಾತ ನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ಹರೀಶ್‍ಕುಮಾರ್,ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಅನಂದ್, ಹೆಚ್ಚುವರಿ ಪೊಲೀಸ್ ವರಿ ಷ್ಠಾಧಿಕಾರಿ ಗೀತಾಪ್ರಸನ್ನ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.