ಸದ್ಯದ ಪರಿಸ್ಥಿತಿಯಲ್ಲಿ ಆನ್‍ಲೈನ್ ಶಿಕ್ಷಣ ನೀಡಿ: ರಾಜ್ಯದ ಆದೇಶಕ್ಕೆ ಹೈಕೋರ್ಟ್ ತಡೆ
ಮೈಸೂರು

ಸದ್ಯದ ಪರಿಸ್ಥಿತಿಯಲ್ಲಿ ಆನ್‍ಲೈನ್ ಶಿಕ್ಷಣ ನೀಡಿ: ರಾಜ್ಯದ ಆದೇಶಕ್ಕೆ ಹೈಕೋರ್ಟ್ ತಡೆ

July 9, 2020

ಬೆಂಗಳೂರು, ಜು. 8- ಎಲ್‍ಕೆಜಿಯಿಂದ 10ನೇ ತರಗತಿಯವರೆಗಿನ ಆನ್‍ಲೈನ್ ಶಿಕ್ಷಣ ರದ್ದುಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ನ್ಯಾ. ಓಕಾ ನೇತೃತ್ವದ ದ್ವಿಸದಸ್ಯ ಪೀಠ ನಿಮ್ಹಾನ್ಸ್ ವೈದ್ಯರ ವರದಿ ಆಧರಿಸಿ ಸರ್ಕಾರ ಈ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ಜೂನ್ 15 ಮತ್ತು 27ರಂದು ಆನ್‍ಲೈನ್ ಶಿಕ್ಷಣವನ್ನು ನಿಷೇ ಧಿಸಿ ಹೊರಡಿಸಿದ್ದ ಆದೇಶ ಮಕ್ಕಳ ಮೂಲ ಭೂತ ಹಕ್ಕಿನ ಉಲ್ಲಂಘನೆ ಎಂದು ಅಭಿಪ್ರಾಯ ಪಟ್ಟಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭ ಗೊಂಡಿದೆ. ಕೋವಿಡ್-19 ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗ ಬಾರದು. ಸರ್ಕಾರ ಗ್ರಾಮೀಣ ಭಾಗಕ್ಕೂ ಮೂಲಭೂತ ಸೌಕರ್ಯ ಒದಗಿಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಆನ್‍ಲೈನ್ ಶಿಕ್ಷಣದ ಅಗತ್ಯವಿದೆ. ಈ ಸಂದರ್ಭದಲ್ಲಿ ಆನ್‍ಲೈನ್ ಮೂಲಕ ಕೋಚಿಂಗ್/ ತರಬೇತಿ ನೀಡ ಬಹುದು ಎಂದು ಮಧ್ಯಂತರ ಆದೇಶ ಪ್ರಕಟಿ ಸಿದೆ. ಕೊರೊನಾ ಕಾರಣದಿಂದ ಶಾಲಾ, ಕಾಲೇಜುಗಳು ಬಂದ್ ಆಗಿದ್ದು, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಆರಂಭಿಸಿದ್ದವು. ಆದರೆ ಖಾಸಗಿ ಶಾಲೆಗಳ ಕ್ರಮಕ್ಕೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ ಆನ್‍ಲೈನ್ ಶಿಕ್ಷಣ ನಡೆಸದಂತೆ ಸೂಚನೆ ನೀಡಿ ಆದೇಶ ಜಾರಿ ಮಾಡಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದವು.

Translate »