ಗಂಗಾ ಕಲ್ಯಾಣ ಯೋಜನೆ ಸಕಾಲಕ್ಕೆ ಸೌಲಭ್ಯ ತಲುಪಿಸಿ
ಚಾಮರಾಜನಗರ

ಗಂಗಾ ಕಲ್ಯಾಣ ಯೋಜನೆ ಸಕಾಲಕ್ಕೆ ಸೌಲಭ್ಯ ತಲುಪಿಸಿ

November 29, 2018

ಚಾಮರಾಜನಗರ: ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಿಂದ ಫಲಾನುಭವಿಗಳಿಗೆ ಅತಿ ಶೀಘ್ರವಾಗಿ ಬೋರ್‍ವೆಲ್ ಕೊರೆದು ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸವನ್ನು ವಿಳಂಬ ಮಾಡದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗ ಗಳ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾ ತರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭ ವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಬೋರ್‍ವೆಲ್ ಕೊರೆದು ಬಹಳ ದಿನಗಳಾ ದರೂ ವಿದ್ಯುತ್ ಸಂಪರ್ಕ ಕಲ್ಪಿಸದಿ ರುವುದು ಪರಿಶೀಲನೆ ವೇಳೆ ಗಮನಿಸಲಾ ಗಿದೆ. ಇನ್ನು ಮುಂದೆ ತ್ವರಿತವಾಗಿ ಬೋರ್ ವೆಲ್ ಕೊರೆದು ವಿಳಂಬ ಮಾಡದೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ನಿರ್ವ ಹಿಸಿ ಫಲಾನುಭವಿಗಳಿಗೆ ಸಕಾಲಕ್ಕೆ ನೆರ ವಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮಾತನಾಡಿ, ಉಸ್ತುವಾರಿ ಕಾರ್ಯದರ್ಶಿಯವರ ಸೂಚನೆ ಯಂತೆ ತಹಸೀಲ್ದಾರ್, ಇತರೆ ಅಧಿಕಾರಿ ಗಳ ಜತೆ ಗಂಗಾಕಲ್ಯಾಣ ಯೋಜನೆ ಯನ್ನು ತಾಲೂಕುವಾರು ಪರಿಶೀಲಿಸಲು ಸೂಚಿಸಲಾಗಿತ್ತು. ಈ ವೇಳೆ ಅನೇಕ ಭಾಗ ದಲ್ಲಿ ಇನ್ನು ವಿದ್ಯುದೀಕರಣ ಕೆಲಸ ಬಾಕಿ ಇದೆ ಎಂಬ ವರದಿ ಬಂದಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಇಷ್ಟು ತಡವಾದರೆ ಹೇಗೆ? ಕೂಡಲೇ ಶೀಘ್ರಗತಿಯಲ್ಲಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳ ಬೇಕು ಎಂದರು.
ಕುಡಿಯುವ ನೀರಿನ ಯೋಜನೆ ಕುರಿತು ಪ್ರಗತಿ ಪರಿಶೀಲಿಸಿದ ಉಸ್ತುವಾರಿ ಕಾರ್ಯ ದರ್ಶಿಗಳು ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗೆ ಆದ್ಯತೆ ನೀಡಬೇಕು. ಮಳೆಯ ಪ್ರಮಾಣ ಕಡಿಮೆಯಾದಲ್ಲಿ ಕುಡಿಯುವ ನೀರಿಗೆ ಯಾವ ಗ್ರಾಮಗಳಲ್ಲಿ ಸಮಸ್ಯೆ ಉಂಟಾಗಬಹುದೆಂಬ ಪಟ್ಟಿಯನ್ನು ತಯಾರಿಸಿ ಕೊಂಡು ಅಂತಹ ಗ್ರಾಮಗಳಿಗೆ ಯಾವುದೇ ಕೊರತೆ ಬಾರದಂತೆ ಮುಂಜಾಗರೂಕತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಸ್ತು ವಾರಿ ಕಾರ್ಯದರ್ಶಿಗಳು ತಿಳಿಸಿದರು.

ಮಳೆ ಹಾಗೂ ಬೆಳೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆಯುವ ವೇಳೆ ಬಿತ್ತನೆ ಬೀಜ, ರಸಗೊಬ್ಬರಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ನಿಯ ಮಾನುಸಾರವಾಗಿ ಕರೆಯಬೇಕು. ಬಸ್ ಗಳಿಗೆ ನೀಡಲಾಗಿರುವ ಪರವಾನಗಿ ಮಾರ್ಗ ದಲ್ಲಿ ಸಂಚರಿಸುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಸುರಕ್ಷತಾ ಕ್ರಮಗಳ ಬಗ್ಗೆಯೂ ಖಾತರಿಪಡಿಸಿಕೊಳ್ಳಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.

ಮೇವು ದಾಸ್ತಾನು, ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುತ್ತಿರುವ ಪಿಂಚಣಿ ವ್ಯವಸ್ಥೆ, ಬೆಳೆ ಸಮೀಕ್ಷೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಜನಸ್ಪಂದನ ಸಭೆಯ ಅರ್ಜಿ ಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವಂತಾಗ ಬೇಕು. ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಿಗೆ ವ್ಯಾಪಕವಾಗಿ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಬೇಕು.
-ರಾಜೇಂದ್ರ ಕುಮಾರ್ ಕಠಾರಿಯಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Translate »