ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯ
ಕೊಡಗು

ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯ

September 28, 2018

ಕುಶಾಲನಗರ: ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಾಧ್ಯ ಎಂದು ವಿರಾಜಪೇಟೆಯ ಅರಮೇರಿ ಕಳಂ ಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾ ರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀ ರಾಮ್ ಫೌಂಡೇಶನ್ ಪ್ರಯೋಜಕ ತ್ವದಲ್ಲಿ ಶ್ರೀ ರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪನಿ ಆಶ್ರಯದಲ್ಲಿ ಸ್ಥಳೀಯ ರೈತ ಸಹ ಕಾರ ಭವನದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಆಶೀರ್ವಚನ ನೀಡಿದ ಅವರು, ವಿದ್ಯಾರ್ಥಿಗಳಿಗೆ ಸಮಾಜ ಮುಖಿ ಶಿಕ್ಷಣ ಒದಗಿಸುವುದರೊಂದಿಗೆ ಸಾಮಾ ಜಿಕ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳಲು ಪ್ರೇರೇಪಿಸಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಜೀವನದಲ್ಲಿ ಅಭಿ ವೃದ್ಧಿ ಹೊಂದಲು ಸಾಧನೆಯ ಛಲ, ಕಠಿಣ ಪರಿಶ್ರಮ ಬೇಕಿದೆ. ಶೈಕ್ಷಣಿಕ ಕಾರ್ಯಕ್ರಮ ಗಳ ಮೂಲಕ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕೆ ಸಂಘಸಂಸ್ಥೆಗಳ ಸಹಕಾರದ ಅಗತ್ಯವಿದೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಆಸ್ತಿಯಾಗಿ ಪರಿವರ್ತಿಸಬೇಕಿದೆ. ವಿದ್ಯಾರ್ಥಿಗಳು ತಮಗೆ ದೊರೆಕುವ ಪ್ರೋತ್ಸಾಹವನ್ನು ಸಾಧನೆ ಯಾಗಿ ಪರಿವರ್ತಿಸಿಕೊಳ್ಳುವ ಮೂಲಕ ಬದ್ದತೆ ಪ್ರದರ್ಶಿಸಬೇಕಿದೆ ಎಂದರು.

ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಬಿ.ಹೊಳ್ಳ ಮಾತನಾಡಿ, ಸ್ವ-ಉದ್ಯೋಗ ಹಾಗೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ತಮ್ಮ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ. 5 ವರ್ಷಗಳ ಕಾಲ ದೇಶಾ ದ್ಯಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದ್ದು ಸಾರಿಗೆ ಉದ್ಯಮ ಕಾರ್ಮಿ ಕರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದ್ದು ಕೊಡಗು ಜಿಲ್ಲೆ ಯಲ್ಲಿ 8ನೇ ತರಗತಿಯಿಂದ ದ್ವಿತೀಯ ಪಿಯುಸಿ ತನಕದ ಸುಮಾರು 2000 ವಿದ್ಯಾರ್ಥಿ ಗಳಿಗೆ ಅಂದಾಜು ರೂ.50 ಲಕ್ಷದಷ್ಟು ಪ್ರೋತ್ಸಾಹ ಧನ ವಿತರಿಸಲಾಗುತ್ತಿದೆ ಎಂದರು.

ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್, ಸಂಸ್ಥೆಯ ಜನರಲ್ ಮ್ಯಾನೇಜರ್, ಶರತ್ ಚಂದ್ರ ಭಟ್ ಕೆ, ಕೊಡಗು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ್, ಜಿಲ್ಲಾ ಪ್ರವಾಸಿ ವಾಹನ ಮಾಲೀಕರು, ಚಾಲಕರ ಸಂಘದ ಅಧ್ಯಕ್ಷ ಕುಳಿಯಕಂಡ ಸಂಪತ್, ಸಂಸ್ಥೆಯ ರಾಜ್ಯ ಘಟಕದ ಪ್ರಮುಖರಾದ ನಂದಗೋಪಾಲ್ ಸ್ಥಳೀಯ ಶಾಖಾ ಪ್ರಮು ಖರು, ಮುಖ್ಯಸ್ಥರು, ಅಧಿಕಾರಿಗಳು, ವಿದ್ಯಾ ರ್ಥಿಗಳು, ಪೋಷಕರು ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಬೆಂಗಳೂರಿನ ನಾರಾಯಣ ದಂಪತಿಗಳಿಂದ ಮ್ಯಾಜಿಕ್ ಶೋ, ಕೊಡವ ಸಾಂಸ್ಕøತಿಕ ನೃತ್ಯಗಳ ಪ್ರದರ್ಶನ ಜರುಗಿತು.

Translate »