ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ಅಕ್ರಮ ಬಯಲು
ಮೈಸೂರು

ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ಅಕ್ರಮ ಬಯಲು

May 5, 2022

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿ ಹೇಳಿಕೆ
ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ
ಸಚಿವ ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲೇ ಷಡ್ಯಂತರ
ಬೆAಗಳೂರು, ಮೇ ೪(ಕೆಎಂಶಿ)- ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮ ಪೊಲೀಸ್ ಇಲಾಖೆಯಿಂ ದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣ ಗೆಗಳಿಗೂ ಈ
ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್ ಇದೆ ಎಂದರು.

ಚAದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣ ಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರ ಸ್ಪರ ದ್ವಿಚಕ್ರ ವಾಹನ ಡಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು. ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಅವರು ಹೇಳಿದರು.

ನಿಷ್ಠಾವಂತ, ಪ್ರಾಮಾಣ ಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್ ಪಿನ್ ಲಿಂಕ್ ಇತ್ತು. ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. ೩೦% ಅಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ ೩೦-೪೦% ಅಭ್ಯರ್ಥಿಗಳು ಪ್ರಾಮಾಣ ಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗ ಬಾರದು ಎಂದಷ್ಟೇ ನಾನು ಹೇಳಿದ್ದೆ ಎಂದರು.

ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಬಳಿ ಸಚಿವರ ವಿರುದ್ಧ ದಾಖಲೆ ಇದೆಯಾ? ಅವರ ವಿರುದ್ಧ ಎಲ್ಲಿದೆ ದಾಖಲೆ? ಎಂದು ಪ್ರಶ್ನಿಸಿದ ಮಾಜಿ ಮುಖ್ಯ ಮಂತ್ರಿಗಳು; ಸಚಿವರ ವಿರುದ್ಧ ಅವರ ಸಹೋ ದ್ಯೋಗಿಗಳೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಬರುತ್ತಿದ್ದಂತೆಯೇ ಅದೆಲ್ಲ ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದ್ದಾರೆ. ಇದೆಲ್ಲ ಅಮಿತ್ ಶಾ ತಲೆಗೆ ಹೋಗಲಿ ಎಂದೇ ಸಚಿವರ ವಿರುದ್ಧ ಮಾಹಿತಿ ನೀಡಿದ್ದಾರೆ ಎಂದರು.

ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲಿಯೇ ಸಂಚು ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ, ನಾವು ಹಚ್ಚಬೇಕಿಲ್ಲ. ನಾನು ಮತ್ತೆ ಪೆಟ್ರೋಲ್ ತೆಗೆದುಕೊಂಡು ಹೋಗ್ಲಾ ಸುರಿಯೋಕೆ? ಕಾಂಗ್ರೆಸ್ ನಾಯಕರಿಗೆ ನೈಜ ವಿಷಯಗಳ ಮೇಲೆ ಹೋರಾಟ ನಡೆಸುವ ಶಕ್ತಿ ಇಲ್ಲ. ಯಾರೋ ಹೇಳಿದ್ದನ್ನು ಹೇಳ್ಕೋತಾರೆ ಅಷ್ಟೇ ಎಂದು ಮಾಜಿ ಸಿಎಂ ತಿಳಿಸಿದರು.

ಮಾಜಿ ಸಿಎಂ ಪುತ್ರನ ವಿರುದ್ಧ ದೂರು
ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬAಧಿಸಿ ದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ.

ಭ್ರಷ್ಟಾಚಾರದ ವಿರುದ್ಧ ನಾವು ಸಂಘ ಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ. ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ. ಪಿಎಸ್‌ಐ ಪರೀಕ್ಷೆ ಅಕ್ರಮ ದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋ ಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣ ದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋ ಪಿಸಿದ್ದು ಅವರನ್ನು ವಿಚಾರಣೆಗೆ ಕರೆತರ ಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ವಕೀಲರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಕ್ರಮದಲ್ಲಿ ಅಭ್ಯರ್ಥಿಗಳು, ಮಧ್ಯವರ್ತಿ ಗಳನ್ನು ಮಾತ್ರ ಸಿಐಡಿ ವಿಚಾರಣೆ ನಡೆಸು ತ್ತಿದೆ. ಆದರೆ ಹಣ ಪಡೆದಿರುವ ದೊಡ್ಡ ವ್ಯಕ್ತಿ ಗಳು, ಐಪಿಎಸ್ ಅಧಿಕಾರಿಗಳನ್ನು ವಿಚಾರಣೆ ನಡೆಸಿಲ್ಲ. ರಾಜ್ಯದ ಪ್ರಭಾವಿ ಸಚಿವ ಅಶ್ವತ್ಥ ನಾರಾಯಣ, ಪೊಲೀಸ್ ಅಧಿಕಾರಿ ಅಮೃತ ಪಾಲ್ ಮತ್ತು ಇತರ ಅಧಿಕಾರಿಗಳನ್ನು ವಿಚಾ ರಣೆಗೆ ಕರೆಸಿಲ್ಲ. ಅವರನ್ನು ವಿಚಾರಣೆಗೆ ಒಳ ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಿಎಸ್‌ಐ ಅಕ್ರಮ: ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತರಾಜು ವರ್ಗಾವಣೆ
ಬೆಂಗಳೂರು, ಮೇ ೪- ೫೪೫ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ದೊಡ್ಡ ದೊಡ್ಡ ರಾಜಕಾರಣ ಗಳು, ಸಚಿವರು, ಪೊಲೀಸ್ ಅಧಿಕಾರಿಗಳ ಹೆಸರುಗಳು ಈಗ ಕೇಳಿ ಬರುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದರು ಎಂಬ ಶಂಕೆ ಹಿನ್ನೆಲೆಯಲ್ಲಿ ಡಿವೈಎಸ್ಪಿ ಶಾಂತರಾಜು ಅವರನ್ನು ಸಿಐಡಿ ಅಧಿಕಾರಿಗಳು ಕರೆದು ವಿಚಾರಣೆ ನಡೆಸಿದ್ದಾರೆ. ಹಗರಣ ಹೊರಬರುತ್ತಿದ್ದಂತೆ ಇವರನ್ನು ಐಎಸ್‌ಡಿಗೆ(ಆಂತರಿಕ ಭದ್ರತಾ ವಿಭಾಗಕ್ಕೆ) ವರ್ಗಾವಣೆಗೊಂಡಿದ್ದಾರೆ. ಡಿವೈಎಸ್ಪಿ ಶಾಂತರಾಜು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ನಾಯಕರ ಆರೋಪ ನಂತರ ನೇಮಕಾತಿ ಎಡಿಜಿಪಿ ಅಮೃತ್ ಪಾಲ್ ಅವರ ವರ್ಗಾವಣೆಯಾಗಿತ್ತು. ಪಿಎಸ್‌ಐ ನೇಮಕಾತಿ ಭ್ರಷ್ಟಾಚಾರ ಬ್ರಹ್ಮಾಂಡ ಹೊರಬಿದ್ದು ಒಂದೂವರೆ ತಿಂಗಳಾಗುತ್ತಾ ಬಂದಿದ್ದು, ಎಡಿಜಿಪಿ ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ದಳದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Translate »