ಮೈಸೂರಲ್ಲಿ ಪಿಯು ಉಪನ್ಯಾಸಕರ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಪಿಯು ಉಪನ್ಯಾಸಕರ ಪ್ರತಿಭಟನೆ

November 29, 2019

ಮೈಸೂರು,ನ.28(ಎಂಟಿವೈ)- ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಬೆಳಿಗ್ಗೆ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಪ್ರತಿಭಟಿಸಿದರು.

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಆಶ್ರಯದಲ್ಲಿ ಮೈಸೂರಿನ ವಿವಿಧ ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಬಾಕಿ ಯಿರುವ 2 ತಿಂಗಳ ವೇತನ ಬಿಡುಗಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಪದವಿಪೂರ್ವ ಕಾಲೇಜುಗಳ ಉಪ ನ್ಯಾಸಕರಿಗೆ 2 ತಿಂಗಳಾದರೂ ವೇತನ ನೀಡದೇ 12 ಸಾವಿರ ಸರ್ಕಾರಿ, ಅನು ದಾನಿತ ಕಾಲೇಜುಗಳ 6 ಸಾವಿರ ಉಪ ನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ತೊಂದರೆಗೆ ಸಿಲುಕಿದ್ದಾರೆ. ಇತ್ತೀಚಿನ ದಿನ ಗಳಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಾಕಿ ವೇತನ ಬಿಡುಗಡೆಗೆ ಮನವಿ ಮಾಡಿದರು.

ಪದವಿ ಪೂರ್ವ ಕಾಲೇಜು ಉಪ ನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿ ಸುವ ಸಂಬಂಧ ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಎರಡನೇ ಹೆಚ್ಚುವರಿ ವೇತನ ಬಡ್ತಿಯನ್ನು ಮಂಜೂರು ಮಾಡಬೇಕು. 2008ರ ನಂತರ ಆಯ್ಕೆಯಾದ ಉಪ ನ್ಯಾಸಕರಿಗೆ ನೀಡುತ್ತಿದ್ದ 500 ರೂ.ಗಳ ಎಕ್ಸ್ ಗ್ರೇಷಿಯಾವನ್ನು ಕೂಡಲೇ ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಈಗಾ ಗಲೇ ನೀಡಿರುವ ಎಕ್ಸ್‍ಗ್ರೇಷಿಯಾವನ್ನು ಮರುಪಾವತಿಸುವಂತೆ ಮಾಡಿರುವ ಆದೇಶವನ್ನು ಕೂಡಲೇ ಹಿಂಪಡೆಯ ಬೇಕು. ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ ಪದವಿ ಪೂರ್ವ ಕಾಲೇಜು ಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿ ರುವ ಉಪನ್ಯಾಸಕರುಗಳಿಗೆ ಕಾಲಮಿತಿ ವೇತನ ಬಡ್ತಿಯನ್ನು ಕೂಡಲೇ ಮಂಜೂರು ಮಾಡಿ, ಆದೇಶ ಹೊರಡಿ ಸುವಂತೆಯೂ ಕೋರಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸ ಕರ ಕಾರ್ಯಭಾರ ಕುರಿತು ಉನ್ನತ ಮಟ್ಟದ ಪರಿಷತ್ ಸಮಿತಿ ರಚಿಸಬೇಕು, ಅಲ್ಲಿಯವರೆಗೆ ಪ್ರತಿ ಉಪನ್ಯಾಸಕರಿಗೆ ವಾರ ದಲ್ಲಿ 16 ಗಂಟೆಗಳ ಬೋಧನಾ ಅವಧಿ ಯನ್ನು ಮುಂದುವರಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪ ನ್ಯಾಸಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸಿ.ಯೋಗಾನಂದ, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಎಂ.ಎಂ.ಮಹದೇವ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಸಿ.ಮಂಜೇಗೌಡ, ಕೋಶಾಧ್ಯಕ್ಷ ನಾಗ ಭೂಷಣ ಆರಾಧ್ಯ ಸೇರಿದಂತೆ ಇನ್ನಿತ ರರು ಪಾಲ್ಗೊಂಡಿದ್ದರು.

Translate »