ಪ್ರಸಕ್ತ ಸಾಲಿನಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ
ಮೈಸೂರು

ಪ್ರಸಕ್ತ ಸಾಲಿನಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ

October 5, 2019

ಬೆಂಗಳೂರು: ಮಕ್ಕಳ ಕಲಿಕಾ ಮಟ್ಟ ಹೆಚ್ಚಿಸುವ ಉದ್ದೇಶ ದಿಂದ ಪ್ರಸಕ್ತ ಶೈಕ್ಷ ಣಿಕ ವರ್ಷದಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಜಾರಿಯಾಗ ಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪ್ರಶ್ನೆಗಳನ್ನು SSಐಅ ಪರೀಕ್ಷಾ ಮಂಡಳಿ ತಯಾರಿಸಲಿದೆ. ಆದರೆ, ಮೌಲ್ಯಮಾಪನವನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು ಎಂದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳನ್ನು ತಯಾರು ಮಾಡುವ ಉದ್ದೇಶದಿಂದ ಏಳನೇ ತರ ಗತಿಯಲ್ಲಿಯೇ ಪಬ್ಲಿಕ್ ಪರೀಕ್ಷೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಸರ್ಕಾರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಭಾರಿ ವಿವಾದಕ್ಕೆ ಕಾರಣವಾಗಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆಯಲ್ಲಿ ಕೆಲವು ಬದಲಾವಣೆ ತರುವ ಚಿಂತನೆ ನಡೆಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಕರ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಬದಲಿಸಿ, ಅದಕ್ಕೆ ವಿಶೇಷ ವರ್ಗಾವಣೆ ಎಂದು ಹೆಸರಿಸಲಾಗುವುದು. 50 ವರ್ಷ ಮೇಲ್ಪಟ್ಟ ಶಿಕ್ಷಕಿಯರು ಮತ್ತು 55 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಚಿಂತನೆ ಇದೆ ಎಂದರು. ಪ್ರಾಥಮಿಕ ಶಿಕ್ಷಕರಿಗೆ ತಾಲೂಕಿನ ಒಳಗೆಯೇ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲೆಯ ಒಳಗಡೆಯೇ ವರ್ಗಾವಣೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಒಂದು ಅಂತಿಮ ನಿರ್ಧಾರ ಕೈಗೊಂಡ ನಂತರ ವರ್ಗಾವಣೆ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗುವುದು ಎಂದರು.

Translate »