ಮೈಸೂರು-ವಿರಾಜಪೇಟೆ ಮಾರ್ಗದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ
ಕೊಡಗು

ಮೈಸೂರು-ವಿರಾಜಪೇಟೆ ಮಾರ್ಗದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ

January 24, 2019

ಬೆಂಗಳೂರು: ಮೈಸೂರು-ವಿರಾಜಪೇಟೆ ಮಾರ್ಗದಲ್ಲಿ ರಾತ್ರಿ ಸಂಚಾರವನ್ನು ನಿಷೇಧಿಸುವಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರಿನ ಹೆಚ್.ಸಿ.ಪ್ರಕಾಶ್ ಮತ್ತು ಎ.ಎಂ.ಮಹೇಶ್ ಅವರುಗಳು ಈ ಕುರಿ ತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಉಚ್ಛನ್ಯಾಯಾಲಯಕ್ಕೆ ಸಲ್ಲಿಸಿ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಮತ್ತಿಗೋಡು ಆನೆ ಶಿಬಿರದ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲು ಸರ್ಕಾರಕ್ಕೆ ನಿರ್ದೇ ಶಿಸಬೇಕು ಎಂದು ಕೋರಿದ್ದರು.

ಈ ಅರ್ಜಿ ಕುರಿತಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯ ಪೀಠ ಬುಧವಾರ ವಿಚಾರಣೆ ನಡೆಸಿತು. ನಂತರ ಪ್ರಕರಣದ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯ ದರ್ಶಿ, ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕೊಡಗು ಹಾಗೂ ಮೈಸೂರು ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ವನ್ಯ ಜೀವಿಗಳ ಸಂರಕ್ಷಣೆಯ ದೃಷ್ಟಿ ಯಿಂದ ನಾಗರಹೊಳೆ, ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಮತ್ತಿಗೋಡು ಆನೆ ಶಿಬಿರದ ಬಳಿ ಹಾದುಹೋಗುವ ರಾಜ್ಯ ಹೆದ್ದಾರಿ ಸಂಖ್ಯೆ-90ರ 11 ಕಿ.ಮೀ ಉದ್ದದ ರಸ್ತೆಯಲ್ಲಿ (ಮೈಸೂರು-ವಿರಾಜಪೇಟೆ ರಸ್ತೆ) ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ವಾಹನ ಸಂಚಾರ ನಿಷೇಧ ಮಾಡಬೇಕು. ರಾಜ್ಯ ಹೆದ್ದಾರಿಗಳಲ್ಲಿ ಆನೆಗಳ ಸಾವು ಸಂಭವಿಸುವುದನ್ನು ತಡೆಯಲು ವಿಫಲ ರಾಗಿರುವ ಅಧಿಕಾರಿಗಳನ್ನು ಗುರುತಿಸಲು ತುರ್ತು ವಿಚಾರಣೆ ನಡೆಸಬೇಕು. ಆನೆಗಳ ಸಂರಕ್ಷಣೆ ದೃಷ್ಟಿಯಿಂದ ಪರ್ಯಾಯ ರಸ್ತೆ ನಿರ್ಮಿಸಬೇಕು’ ಎಂಬುದು ಅರ್ಜಿ ದಾರರ ಮನವಿಯಾಗಿದ್ದು, 2018ರ ಅಕ್ಟೋಬರ್‍ನಲ್ಲಿ ನಡೆದ ಸಾಕಾನೆ ರಂಗನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅದು ಮೃತಪಟ್ಟಿದ್ದನ್ನು ಉದಾಹರಣೆ ಯಾಗಿ ಉದ್ದೇಶಿಸಲಾಗಿದೆ.

11 ಕಿ.ಮೀ ಉದ್ದದ ರಸ್ತೆಯಲ್ಲಿ ವೇಗ ನಿಯಂತ್ರಣ ಸೂಚನೆಯ ಡಿಜಿಟಲ್ ಬೋರ್ಡ್‍ಗಳನ್ನು ಅಳವಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದೂ ಸಹ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಲಾಗಿದೆ.

Translate »