ಲೋಕೋಪಯೋಗಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಶೀಘ್ರ ವಿಭಜನೆ
ಮೈಸೂರು

ಲೋಕೋಪಯೋಗಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಶೀಘ್ರ ವಿಭಜನೆ

June 23, 2020

ಬೆಂಗಳೂರು, ಜೂ.22(ಕೆಎಂಶಿ)-ಲೋಕೋಪಯೋಗಿ ಇಲಾಖೆ, ನೀರಾವರಿ, ಗ್ರಾಮೀ ಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಶೀಘ್ರವಾಗಿ ವಿಭಜಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಸೂಚಿಸಿದರು. ವಿಧಾನಸೌಧದಲ್ಲಿ ಇಲಾಖೆಗಳನ್ನು ವಿಭಜಿಸುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಗಳನ್ನು ವಿಭಜಿಸಲು ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸಲಾಗುತ್ತಿದೆ. ಇಂಜಿನಿಯರ್ ಹಾಗೂ ಇಂಜಿನಿಯರಿಂಗ್ ಸಂಘದ ಪದಾಧಿಕಾರಿಗಳ ಅಭಿಪ್ರಾಯ ವನ್ನು ಪಡೆಯಲಾಗಿದೆ. ಈ 3 ಇಲಾಖೆಗಳಿಂದ ಮಾಹಿತಿ ಕ್ರೋಢೀಕರಿಸಲಾಗಿದೆ. ಸಾಧಕ-ಬಾಧಕಗಳ ಕುರಿತು ಚರ್ಚಿಸಲಾಗಿದೆ. ವಿಭಜಿಸುವ ನಿರ್ಣಯವನ್ನು ಕೈಗೊಳ್ಳ ಲಾಗಿದೆ. ಇದು ಉತ್ತಮ ನಿರ್ಧಾರವಾಗಿದೆ. ನೀರಾವರಿ ಸಚಿವರು ಹಾಗೂ ಗ್ರಾಮೀಣಾ ಭಿವೃದ್ಧಿ ಸಚಿವರು ಇಲಾಖೆಗಳ ವಿಭಜನೆ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿ ಅವರಿಗೆ ಡಿಸಿಎಂ ಧನ್ಯವಾದಗಳನ್ನು ವ್ಯಕ್ತಪಡಿಸಿದರು. ಶೀಘ್ರವಾಗಿ ವಿಭಜನೆಯ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

Translate »