ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಲ್ಲ
ಮೈಸೂರು

ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಲ್ಲ

March 21, 2020

ಬೆಂಗಳೂರು, ಮಾ.20-ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಿರ್ದಿಷ್ಟ ದಿನಾಂಕಗಳಲ್ಲೇ ನಡೆಯಲಿದೆ. ಯಾವುದೇ ಪರೀಕ್ಷೆಯನ್ನು ಮುಂದೂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಲಾಗಿದೆ ಎಂಬ ವದಂತಿ ಹಬ್ಬು ತ್ತಿರುವ ಸಂಬಂಧ ಸ್ಪಷ್ಟೀಕರಣ ನೀಡಿರುವ ಸಚಿವರು, ಸರ್ಕಾರ ಅಥವಾ ಪದವಿ ಪೂರ್ವ ಇಲಾಖೆಯಿಂದ ಪರೀಕ್ಷೆಯನ್ನು ಮುಂದೂಡಿಲ್ಲ. ವಿದ್ಯಾರ್ಥಿಗಳು, ಪೆÇೀಷ ಕರು ವದಂತಿಗಳಿಗೆ ಕಿವಿಕೊಡಬಾರದು ಎಂದು ಮನವಿ ಮಾಡಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಬದಲಿಸಿಲ್ಲ: ಮಾ.27ರಿಂದ ಆರಂಭಗೊಳ್ಳಲಿರುವ ಎಸ್ಸೆ ಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡುವ ಅಥವಾ ಪರೀಕ್ಷಾ ದಿನಾಂಕ ಬದಲಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಅಥವಾ ಕರ್ನಾ ಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈವ ರೆಗೂ ತೆಗೆದುಕೊಂಡಿಲ್ಲ. ಹೀಗಾಗಿ ವಿದ್ಯಾರ್ಥಿ ಗಳು ಈ ಬಗ್ಗೆ ಗೊಂದಲ ಅಥವಾ ಭಯ ಪಡುವ ಅಗತ್ಯವಿಲ್ಲ ಮತ್ತು ವದಂತಿ ಗಳಿಗೂ ಕಿವಿಕೊಡಬಾರದು ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

Translate »